BJP President Amit Shah To Visit Bengaluru 'Today'

2015-01-02 25

TV9 News: BJP President Amit Shah To Visit Bengaluru Today By Night..,

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಇಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಅಮಿತಾ ಷಾ ಆಗಮನ ಹಿನ್ನೆಲೆಯಲ್ಲಿ ಬಿಜೆಪಿ ಪಾಳಯದಲ್ಲಿ ಬಿರುಸಿನ ಚಟುವಟಿಕೆ ಆರಂಭವಾಗಿದೆ. ಇಂದು ರಾತ್ರಿ 10 ಗಂಟೆ ಸುಮಾರಿಗೆ ಬೆಂಗಳೂರಿಗೆ ಬಂದಿಳಿಯುವ ಅಮಿತ್ ಷಾ, ನಾಳೆ ಬೆಳಗ್ಗೆಯಿಂದ ಸಂಜೆ ತನಕ ಪಕ್ಷ ಸಂಘಟನೆಯ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಪ್ರಮುಖ ನಾಯಕರು ಸಭೆ ನಡೆಸಿದ್ದಾರೆ. ಅಮಿತ್ ಶಾ ಕಾರ್ಯಕ್ರಮಗಳ ಬಗ್ಗೆ ಪೂರ್ವಭಾವಿಯಾಗಿ, ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ, ಕೇಂದ್ರ ಸಚಿವ ಅನಂತಕುಮಾರ್, ಪರಿಷತ್ ವಿಪಕ್ಷ ನಾಯಕ ಕೆ.ಎಸ್ ಈಶ್ವರಪ್ಪ ಹಾಗೂ ಆರ್.ಅಶೋಕ್​ ಚರ್ಚೆ ನಡೆಸಿದ್ದಾರೆ. ಇನ್ನು, ಬೆಳಗ್ಗೆ 10 ಗಂಟೆಗೆ ಪಕ್ಷದ ಕಚೇರಿಯಲ್ಲಿ ನಡೆಯುವ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಪಾಲ್ಗೊಂಡು ಪಕ್ಷ ಸಂಘಟನೆ ಹಾಗೂ ರಾಜಕೀಯ ನೀತಿಗಳ ಬಗ್ಗೆ ಚರ್ಚಿಸಲಿದ್ದಾರೆ. 11 ಗಂಟೆಗೆ ಮಾಧ್ಯಮಗೋಷ್ಟಿಯಲ್ಲಿ ಮಾತನಾಡುವ ಅಮಿತ್ ಷಾ, 12 ಗಂಟೆಗೆ ಪಕ್ಷದ ಶಾಸಕರು ಹಾಗೂ ಸಂಸದರೊಂದಿಗೆ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಪಕ್ಷದ ಮುಂದಿನ ಗುರಿಗಳ ಬಗ್ಗೆ ಸುಧೀರ್ಘ ಚರ್ಚೆ ನಡೆಯಲಿದೆ. ನಂತರ ಮಧ್ಯಾಹ್ನ 3 ಗಂಟೆಗೆ ಬಸವೇಶ್ವರ ನಗರದ ಗಂಗಮ್ಮ ತಿಮ್ಮಯ್ಯ ಛತ್ರದಲ್ಲಿ ನಡೆಯುವ ಪಕ್ಷದ ಜಿಲ್ಲಾಧ್ಯಕ್ಷರು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಹಾಗೂ ಪಕ್ಷದ ವಿವಿಧ ಹಂತದ ಮುಖಂಡರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಪಕ್ಷದ ಸದಸ್ಯತ್ವದ ಪ್ರಗತಿ ಹಾಗೂ ಸಂಘಟನೆ ಬಗ್ಗೆ ಸುಧೀರ್ಘ ಚರ್ಚೆ ನಡೆಸುವ ಅಮಿತಾ ಷಾ, ದಕ್ಷಿಣ ಭಾರತದಲ್ಲಿ ಪಕ್ಷದ ಸದಸ್ಯತ್ವ ಹೆಚ್ಚಿಸುವ ಬಗ್ಗೆ ರಣತಂತ್ರವನ್ನು ಅಂತಿಮಗೊಳಿಸಲಿದ್ದಾರೆ. ಅಮಿತ್ ಷಾ ರಾಜ್ಯ ಭೇಟಿ ಸಹಜವಾಗಿಯೇ ರಾಜ್ಯ ಬಿಜೆಪಿ ಪಾಳಯದಲ್ಲಿ ಸಂಚಲನ ಮೂಡಿಸಿದ್ದು, ರಾಜ್ಯದಲ್ಲಿ ಪಕ್ಷ ಸಂಘಟನೆಗೆ ಅಮಿತ್ ಷಾ ನೀಡುವ ಟಿಪ್ಸ್ ಬಗ್ಗೆ ಕುತೂಹಲ ಮೂಡಿಸಿದೆ.