Overnight protest with the demand of water to canals in Mandya, has entered the 26th day. The 'Kasturi Karnataka Janapara Vedike' activists on Tuesday launched a mockery last rituals of Chief Minister Siddaramaiah and irrigation minister MB Patil.
ಕೆ.ಆರ್.ಎಸ್ ನಿಂದ ನಾಲೆಗಳಿಗೆ ನೀರು ಬಿಡಲು ಆಗ್ರಹಿಸಿ 'ಕಸ್ತೂರಿ ಕರ್ನಾಟಕ ಜನಪರ ವೇದಿಕೆ' ನಡೆಸುತ್ತಿರುವ ಅಹೋರಾತ್ರಿ ಧರಣಿ 26ನೇ ದಿನಕ್ಕೆ ಕಾಲಿಟ್ಟಿದೆ. ಮಂಗಳವಾರ ಸಂಘಟನೆ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ, ನೀರಾವರಿ ಸಚಿವ ಎಂ.ಬಿ.ಪಾಟೀಲ್ ಅವರ ಅಣಕು ತಿಥಿ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.