The government has taken further steps to gradually reduce subsidy on kerosene, says the sources. Recently, the government has expressed to eliminate the subsidy to LPG.
ಗೃಹ ಬಳಕೆಯ ಎಲ್ ಪಿಜಿ ಸಿಲಿಂಡರ್ ಗಳ ಮೇಲಿನ ಸಬ್ಸಿಡಿಯನ್ನು ಶೀಘ್ರವೇ ಸಂಪೂರ್ಣವಾಗಿ ತೆಗೆದು ಹಾಕುವ ನಿರ್ಧಾರ ಕೈಗೊಂಡಿರುವ ಕೇಂದ್ರ ಸರ್ಕಾರ, ಸೀಮೆ ಎಣ್ಣೆಯ ಮೇಲಿರುವ ಸಬ್ಸಿಡಿಯನ್ನೂ ತೆಗೆದು ಹಾಕಲು ನಿರ್ಧರಿಸಿದೆ. ಸೀಮೆಎಣ್ಣೆಯ ಸಬ್ಸಿಡಿಯನ್ನು ಹಂತಹಂತವಾಗಿ ತೆಗೆಯುವ ಉದ್ದೇಶದಿಂದಲೇ ಇನ್ನು ಮುಂದೆ ಪ್ರತಿ 15 ದಿನಕ್ಕೊಮ್ಮೆ ಪ್ರತಿ ಲೀಟರ್ ಸೀಮೆ ಎಣ್ಣೆ ಬೆಲೆಯನ್ನು 25 ಪೈಸೆಯಂತೆ ಹೆಚ್ಚಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.