ಕಳೆದ ವಾರ ಎಲ್ಪಿಜಿ ಸಿಲಿಂಡರ್ ಸಬ್ಸಿಡಿ ಇರುವುದಿಲ್ಲ ಹಾಗೂ ಪ್ರತಿ ತಿಂಗಳು ರೂ. 4 ಏರಿಸಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿತ್ತು. ತದನಂತರ ಕೇಂದ್ರದ ಈ ನಿರ್ಧಾರದ ವಿರುದ್ಧ ದೇಶದಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.ಈ ಹಿನ್ನೆಲೆಯಲ್ಲಿ ಬಡವರು ಮತ್ತು ಜನಸಾಮಾನ್ಯರು ಬಳಸುತ್ತಿರುವ ಅಡುಗೆ ಅನಿಲ (ಎಲ್ಪಿಜಿ) ಸಿಲಿಂಡರ್ ಗೆ ನೀಡುತ್ತಿರುವ ಸಹಾಯಧನ ಮುಂದುವರೆಯಲಿದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.