ತಿರುವನಂತಪುರಂ, ನವೆಂಬರ್ 07: ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಮಳೆಯ ನಡುವೆ ನಡೆದ ರೋಚಕ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ 6 ರನ್ ಗಳ ಜಯ ದಾಖಲಿಸಿದೆ. ಈ ಗೆಲುವಿನ ಮೂಲಕ ಸರಣಿಯನ್ನು 2 -1 ಅಂತರದಿಂದ ಭಾರತ ಗೆದ್ದುಕೊಂಡಿದೆ. ಮಳೆಯ ಕಾರಣ 8 ಓವರ್ ಗಳಿಗೆ ಸೀಮಿತವಾದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ 67/5 ಸ್ಕೋರ್ ಮಾಡಿತ್ತು. ಇದನ್ನು ಸಮರ್ಥವಾಗಿ ಚೇಸ್ ಮಾಡಿದ ನ್ಯೂಜಿಲೆಂಡ್ ತಂಡ ನಿಗದಿತವಾಗಿ ವಿಕೆಟ್ ಕಳೆದುಕೊಂಡರೂ ಕೊನೆ ಓವರ್ ತನಕ ಹೋರಾಟ ಮುಂದುವರೆಸಿತು. ಅಂತಿಮವಾಗಿ 61/6 ಸ್ಕೋರ್ ಮಾಡಿ ಸೋಲೊಪ್ಪಿಕೊಂಡಿತು. ಭಾರತದ ಪರ ಬೂಮ್ರಾ 2, ಕುಲದೀಪ್ ಯಾದವ್ ಹಾಗೂ ಭುವನೇಶ್ವರ್ ಕುಮಾರ್ ತಲಾ 1 ವಿಕೆಟ್ ಪಡೆದುಕೊಂಡರು. ಪಂದ್ಯಕ್ಕೆ ಮಳೆ ಅಡ್ಡಿಯಾದಾಗ ಟೀಂ ಇಂಡಿಯಾ ಆಟಗಾರರು ಮೈದಾನದಲ್ಲಿ ಫುಟ್ಬಾಲ್ ಆಡಿ ಕಾಲ ಕಳೆದರು.
India beat new zealand in the final t20 encounter in green fields. the match was reduced to an 8 overs game. Bumrah was the player of the match