ಕರ್ನಾಟಕ ವಿಧಾನಸಭಾ ಚುನಾವಣೆ 2018 : ಡಿ ಕೆ ಸುರೇಶ್ ಸ್ಪರ್ಧಿಸುವ ಸಾಧ್ಯತೆ

2017-11-10 337

Energy Minister D.K. Shivakumar's brother and MP from Bengaluru Rural Lok Sabha constituency D.K. Suresh may contest for Karnataka assembly elections 2018.

ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಡಿ.ಕೆ.ಸುರೇಶ್? 'ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವಂತೆ ಕಾರ್ಯಕರ್ತರು ಒತ್ತಡ ಹೇರುತ್ತಿದ್ದಾರೆ. ನಾನು ಎಲ್ಲಿಂದ ಸ್ಪರ್ಧಿಸಬೇಕು? ಎನ್ನುವುದನ್ನು ಪಕ್ಷದ ನಾಯಕರು ತೀರ್ಮಾನ ಮಾಡುತ್ತಾರೆ' ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಮತ್ತು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರ ಸಹೋದರ ಡಿ.ಕೆ.ಸುರೇಶ್ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆ ಹುಟ್ಟು ಹಾಕಿದೆ. ರಂಗೇರಿರುವ ಚನ್ನಪಟ್ಟಣ ಕ್ಷೇತ್ರದ ಚುನಾವಣೆಗೆ ಇದರಿಂದ ಹೊಸ ದಿಕ್ಕು ಸಿಕ್ಕಿದೆ.ಚನ್ನಪಟ್ಟಣ ಕ್ಷೇತ್ರದ ಶಾಸಕ ಸಿ.ಪಿ.ಯೋಗೇಶ್ವರ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮೇಲೆ ಡಿಕೆಶಿ ಸಹೋದರರ ವಿರುದ್ಧ ಹಲವು ಆರೋಪಗಳನ್ನು ಮಾಡುತ್ತಿದ್ದಾರೆ. ಡಿ.ಕೆ.ಸುರೇಶ್ ಅವರು ಚನ್ನಪಟ್ಟಣ ಕ್ಷೇತ್ರದಿಂದ ಸಿ.ಪಿ.ಯೋಗೇಶ್ವರ ವಿರುದ್ಧ ಸ್ಪರ್ಧಿಸುವರೇ? ಕಾದು ನೋಡಬೇಕು. ರಾಮನಗರದಲ್ಲಿ ಗುರುವಾರ ಮಾತನಾಡಿದ ಡಿ.ಕೆ.ಸುರೇಶ್ ಅವರು, 'ಡಿಕೆಶಿ ಸಹೋದರರು ಕಾಂಗ್ರೆಸ್ ಪಕ್ಷದಲ್ಲಿಯೇ ಇರುತ್ತೇವೆ. ಕಾಂಗ್ರೆಸ್ ಪಕ್ಷ ನಮಗೆ ಎಲ್ಲವನ್ನೂ ಕೊಟ್ಟಿದೆ' ಎಂದು ಹೇಳಿದರು.

Videos similaires