ವೈದ್ಯರ ಪ್ರತಿಭಟನೆ, ಪ್ರತಿಪಕ್ಷಗಳತ್ತ ಕೈ ತೋರಿಸಿದ ಸಿಎಂ! | Oneindia Kannada

2017-11-16 826

ಖಾಸಗಿ ಆಸ್ಪತ್ರೆಗಳ ವೈದ್ಯರು ಮತ್ತು ಸರ್ಕಾರದ ನಡುವಿನ ಹಗ್ಗ ಜಗ್ಗಾಟ ಮುಂದುವರೆದಿದೆ. ವೈದ್ಯರು ನಡೆಸುತ್ತಿರುವ ಮುಷ್ಕರ 4ನೇ ದಿನಕ್ಕೆ ಕಾಲಿಟ್ಟಿದೆ. ವೈದ್ಯರ ಮುಷ್ಕರದ ಬಗ್ಗೆ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ದ್ಯರ ಮುಷ್ಕರದಿಂದಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ. ಇಂದಿನಿಂದ ಖಾಸಗಿ ಆಸ್ಪತ್ರೆಗಳ ಹೊರ ರೋಗಿಗಳ ವಿಭಾಗವನ್ನು ಬಂದ್ ಮಾಡಿ ವೈದ್ಯರ ಮುಷ್ಕರಕ್ಕೆ ಬೆಂಬಲ ಸೂಚಿಸಲಾಗಿದೆ. ವೈದ್ಯರ ಮುಷ್ಕರದ ಬಗ್ಗೆ ಸಿದ್ದರಾಮಯ್ಯ ಅವರು ಸರಣಿ ಟ್ವಿಟ್‌ಗಳನ್ನು ಮಾಡಿದ್ದಾರೆ. 'ವೈದ್ಯರು ಮುಷ್ಕರವನ್ನು ಸ್ಥಗಿತಗೊಳಿಸುವಂತೆ ಮನವಿ ಮಾಡುತ್ತೇನೆ' ಎಂದು ಹೇಳಿದ್ದಾರೆ. ಇಂದು ಅಂದರೆ 16/11/17 ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ಸಚಿವ ರಮೇಶ್ ಕುಮಾರ್ ಅವರ ಜೊತೆ ಸಭೆ ನಡೆಸಲಿದ್ದಾರೆ. ನಂತರ ಮಸೂದೆಯನ್ನು ಮಂಡನೆ ಮಾಡುವ ಬಗ್ಗೆ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ.

Doctors continue their strike and our C.M siddaramaiah tweeted a series of tweets and tried to resolve the issue.

Videos similaires