Karnataka Assembly Elections 2018 : ಕಾಂಗ್ರೆಸ್ ಎಂಎಲ್ಎ ಎಂಪಿ ರವೀಂದ್ರ ರಾಜಕೀಯ ನಿವೃತ್ತಿ |Oneindia Kannada

2017-11-27 8

ಎಂ.ಪಿ.ರವೀಂದ್ರ ರಾಜಕೀಯ ನಿವೃತ್ತಿ : ಸಿದ್ದರಾಮಯ್ಯ ಹೇಳುವುದೇನು? ಹರಪನಹಳ್ಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಂ.ಪಿ.ರವೀಂದ್ರ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ. ಅಭಿಮಾನಿಗಳು ನಿರ್ಧಾರ ವಾಪಸ್ ಪಡೆಯುವಂತೆ ಒತ್ತಡ ಹಾಕುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ಮನವೊಲಿಸಲು ಪ್ರಯತ್ನ ಪಡುತ್ತಿದ್ದಾರೆ. ಭಾನುವಾರ ಹರಪನಹಳ್ಳಿಯಲ್ಲಿ ಮಾತನಾಡಿದ್ದ ಎ.ಪಿ.ರವೀಂದ್ರ ಅವರು, 'ಈಗಿನ ಚುನಾವಣೆಯಲ್ಲಿ ದುಬಾರಿ ಖರ್ಚಿನ ಹಿನ್ನಲೆಯಲ್ಲಿ ರಾಜಕೀಯ ನಿವೃತ್ತಿ ಪಡೆದುಕೊಳ್ಳುವೆ. 2018ರ ಚುನಾವಣೆಗೆ ಸ್ಪರ್ಧಿಸುವುದಿಲ್ಲ' ಎಂದು ಹೇಳಿದ್ದರು.ರವೀಂದ್ರ ಅವರ ಈ ನಿರ್ಧಾರದ ಬಗ್ಗೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ರವೀಂದ್ರ ಅವರ ಅಭಿಮಾನಿಗಳು, ಕುಟುಂಬದವರಿಗೆ ಈ ನಿರ್ಧಾರ ಆಘಾತ ತಂದಿದೆ. ತಾಯಿ ಎಂ.ಪಿ.ರುದ್ರಾಂಭ ಪ್ರಕಾಶ್, 'ನಿರ್ಧಾರ ಬದಲಿಸುವಂತೆ' ಸಲಹೆ ನೀಡಿದ್ದಾರೆ. ಚುನಾವಣಾ ರಾಜಕೀಯದಿಂದ ದೂರವಾಗುವ ನಿರ್ಧಾರವನ್ನು ವಾಪಸ್ ಪಡೆಯುವಂತೆ ಪಕ್ಷದ ಕಾರ್ಯಕರ್ತರು ರವೀಂದ್ರ ಅವರ ಮೇಲೆ ಒತ್ತಡ ಹಾಕುತ್ತಿದ್ದಾರೆ. ರವೀಂದ್ರ ಅವರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬಳಿಕ ಮುಂದಿನ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ.