Where is S M Krishna, one of the charismatic and prudent politicians the Karnataka has seen? Is he being treated respectfully by BJP high command, especially Amit Shah? Why is he not seen in party meetings? Will BJP take political expertise in Karnataka assembly elections?
ಹಿರಿಯ ಮುತ್ಸದ್ದಿ ಎಸ್ಸೆಂ ಕೃಷ್ಣ ಎಲ್ಲಿದ್ದಾರೆ? ಏನ್ಮಾಡ್ತಿದ್ದಾರೆ? ಸರಿಯಾಗಿ 24ನೇ ಮಾರ್ಚ್ ರಂದು ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ವಿದೇಶಾಂಗ ಸಚಿವ, ಮಹಾರಾಷ್ಟ್ರದ ಮಾಜಿ ರಾಜ್ಯಪಾಲ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ಅವರು ಭಾರತೀಯ ಜನತಾ ಪಕ್ಷವನ್ನು ಸೇರಿ ಒಂದು ವರ್ಷವಾಗಲಿದೆ. ಕೃಷ್ಣ ಅವರು ಕಾಂಗ್ರೆಸ್ ಪಕ್ಷಕ್ಕೆ ನಲವತ್ತು ವರ್ಷಗಳ ಸೇವೆಯನ್ನು ಸಲ್ಲಿಸಿ ಅನಿವಾರ್ಯ ಕಾರಣದಿಂದಾಗಿ ಬಿಜೆಪಿಯನ್ನು ಸೇರುವ ಮುನ್ನ, ಅವರು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾರನ್ನು ದೆಹಲಿಯಲ್ಲಿ ಭೇಟಿ ಮಾಡಿದಾಗ, ಅಮಿತ್ ಶಾ ಅವರು ಒಂದು ಮಾತನ್ನು ಹೇಳಿದ್ದರು. "ದೇಶದಲ್ಲಿ ಬದಲಾವಣೆಯ ಸಮಯ ಬಂದಿದೆ. ಎಸ್ ಎಂ ಕೃಷ್ಣ ಅವರ ಸೇರ್ಪಡೆಯಿಂದ ಬಿಜೆಪಿಗೆ ಆನೆಬಲ ಬಂದಂತಾಗಿದೆ. ಭಾರತೀಯ ಜನತಾ ಪಕ್ಷ ಅವರನ್ನು ಅತ್ಯಂತ ಗೌರವಯುತವಾಗಿ ನಡೆಸಿಕೊಳ್ಳಲಿದೆ. ಅವರ ಅಪಾರ ರಾಜಕೀಯ ಜ್ಞಾನದ ಲಾಭವನ್ನು ಬಿಜೆಪಿ ಪಡೆಯಲಿದೆ" ಎಂದು ಅಮಿತ್ ಶಾ ಸಾರಿದ್ದರು.