ಮಹಾತ್ಮಾ ಗಾಂಧಿ ಅಲಂಕರಿಸಿದ ಸ್ಥಾನಕ್ಕೆ ರಾಹುಲ್ ಗಾಂಧಿ. ಭಾರೀ ಚರ್ಚೆಗೆ ಗ್ರಾಸವಾಗಿರುವ, ರಾಹುಲ್ ಗಾಂಧಿ ಅವರ ಸಾಮರ್ಥ್ಯವನ್ನು ಒರೆಗೆ ಹಚ್ಚುವ, ಅವರಿಗೆ ಭಾರೀ ಸವಾಲೊಡ್ಡುವ ಪಟ್ಟಾಭಿಷೇಕದ ಮುಹೂರ್ತ ಹತ್ತಿರ ಬರುತ್ತಿದೆ. ಸೋಮವಾರ, ಡಿಸೆಂಬರ್ 4ರಂದು ಅವರು ಕಾಂಗ್ರೆಸ್ ಅಧ್ಯಕ್ಷ ಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದಾರೆ.ರಾಹುಲ್ ಗಾಂಧಿಯವರಿಗೆ ಪ್ರತಿಯಾಗಿ ಯಾರು ಸ್ಪರ್ಧಿಸಲಿದ್ದಾರೆ ಎಂಬ ಪ್ರಶ್ನೆ ಈಗ ಭಾರೀ ಕುತೂಹಲ ಕೆರಳಿಸಿದೆ. ಈಗಾಗಲೆ ಕೆಲವರು ರಾಹುಲ್ ಅವಿರೋಧವಾಗಿ ಆಯ್ಕೆಯಾಗುವ ಬಗ್ಗೆ ಚಕಾರ ತೆಗೆದಿದ್ದು, ಮಂಗಳವಾರವಷ್ಟೇ ಯಾರ್ಯಾರು ಸ್ಪರ್ಧಿಸಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರ ಸಿಗಲಿದೆ.1885ರಲ್ಲಿ ವೋಮೇಶ್ ಚಂದರ್ ಬ್ಯಾನರ್ಜಿ ಅವರು ಕಾಂಗ್ರೆಸ್ನ ಮೊದಲ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ದಾದಾಬಾಯಿ ನವರೋಜಿ, ಗೋಪಾಲ ಕೃಷ್ಣ ಗೋಖಲೆ, ಮದನ್ ಮೋಹನ್ ಮಾಳವೀಯ, ಅನಿ ಬೆಸಂಟ್, ಲಾಲಾ ಲಜಪತ್ ರಾಯ್, ಮಹಾತ್ಮಾ ಗಾಂಧೀಜಿ, ಸರ್ದಾರ್ ವಲ್ಲಭಭಾಯಿ ಪಟೇಲ್, ಇಂದಿರಾ ಗಾಂಧಿ ಮುಂತಾದವರು ಭವ್ಯ ಇತಿಹಾಸವಿರುವ ಪಕ್ಷದ ಚುಕ್ಕಾಣಿ ಹಿಡಿದಿದ್ದಾರೆ.