ಬಾಬ್ರಿ ಮಸೀದಿ ವಿವಾದದ ಅಂತಿಮ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ನಲ್ಲಿ | Oneindia Kannada

2017-12-05 47

ಉತ್ತರ ಪ್ರದೇಶದಲ್ಲಿನ ಅಯೋದ್ಯೆ ವಿವಾದ ದಶಕಗಳಿಂದ ಕೇಳಿ ಬರುತ್ತಲಿದೆ . ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ಬಾಬ್ರಿ ಮಸೀದಿ ವಿವಾದದ ಅಂತಿಮ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ನಲ್ಲಿ ಇಂದಿನಿಂದ ನಡೆಯಲಿದೆ. ಬಾಬ್ರಿ ಮಸೀದಿಯನ್ನು ಧ್ವಂಸಗೊಳಿಸಿದ ಪ್ರಕರಣ ಬುಧವಾರಕ್ಕೆ (ಡಿ. 6) 25 ವರ್ಷವಾಗಲಿದೆ. ಇನ್ನೇನು 25 ವರ್ಷಕ್ಕೆ ಒಂದು ದಿನ ಬಾಕಿ ಇರುವಾಗಲೇ ಸುಪ್ರೀಂ ಕೋರ್ಟ್ ನ ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠದಲ್ಲಿ ನಡೆಯಲಿದೆ. 2010ರಲ್ಲಿ ಅಲಹಾಬಾದ್ ಹೈಕೋರ್ಟ್ ವಿವಾದಿತ ಬಾಬ್ರಿ ಮಸೀದಿ ಜಾಗವನ್ನು ಹಿಂದೂ ಮಹಾಸಭಾ, ನಿರ್ಮೋಹಿ ಅಖಾಡ ಮತ್ತು ಸುನ್ನಿ ಸಮಿತಿಗೆ ಹಂಚಿಕೆ ಮಾಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ 13 ಮೇಲ್ಮನವಿ ಅರ್ಜಿಗಳು ಸಲ್ಲಿಕೆಯಾಗಿವೆ.ಈ ಎಲ್ಲಾ ಅರ್ಜಿಗಳ ಅಂತಿಮ ವಿಚಾರಣೆ ನಡೆಯಲಿದೆ.
Ayodhya verdict is yet to be given and issue is unresolved since decades.

Videos similaires