ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದ ಕೇಂದ್ರ ಕೌಶಲ ಮತ್ತು ಉದ್ಯಮಶೀಲತೆ ರಾಜ್ಯ ಸಚಿವ ಅನಂತಕುಮಾರ ಹೆಗಡೆ ವಿರುದ್ಧ ದೂರು ದಾಖಲಗಿದೆ. ಸಿದ್ದರಾಮಯ್ಯ ವೋಟಿನಾಸೆಗೆ ಬೂಟು ನೆಕ್ತಾರೆ ಎಂದು ನಾಲಿಗೆ ಹರಿಬಿಟ್ಟ ಹೆಗಡೆ ಅನಂತಕುಮಾರ್ ಹೆಗಡೆ ಅವಹೇಳನಕಾರಿಯಾಗಿ ಮಾತನಾಡಿ ಸಿದ್ದರಾಮಯ್ಯನವರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ಜೆ.ವಿಜಯಕುಮಾರ್ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ,ದೂರನ್ನು ಸ್ವೀಕರಿಸಿದ ನ್ಯಾಯಾಲಯ ದೇವರಾಜ ಪೊಲೀಸ್ ಠಾಣೆಗೆ ವರ್ಗಾಯಿಸಿದೆ. 'ಪ್ರಕರಣ ನಡೆದಿರುವುದು ಬೆಳಗಾವಿಯ ಕಿತ್ತೂರಿನಲ್ಲಿ ನಡೆದಿದ್ದರಿಂದ ದೂರನ್ನು ಅಲ್ಲಿನ ಪೊಲೀಸ್ ಠಾಣೆಗೆ ವರ್ಗಾಯಿಸಲಾಗುತ್ತದೆ ಎಂದು ನಗರ ಪೊಲೀಸ್ಕಮೀಷನರ್ಡಾ.ಎ.ಎಸ್.ಸುಬ್ರಹ್ಮಣ್ಯೇಶ್ವರರಾವ್ ತಿಳಿಸಿದರು.ಇತ್ತೀಚೆಗೆ ಬೆಳಗಾವಿ ಜಿಲ್ಲೆ ಕಿತ್ತೂರಿನಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ "ಸಿದ್ದರಾಮಯ್ಯ ವೋಟಿನ ಆಸೆಗೆ ಏನಬೇಕಾದ್ರು ಮಾಡುತ್ತಾರೆ. ವೋಟಿಗಾಗಿ ಯಾರು ಬೇಕೋ ಅವರ ಬೂಟ್ ಸಹ ನೆಕ್ಕುವ ಸ್ಥಿತಿಗೆ ತಲುಪಿದ್ದಾರೆ" ಎಂದು ಏಕವಚನದಲ್ಲಿಯೇ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದರು.
A Complaint filed against union minister Ananth Kumar Hegde for controversial statement on CM Siddaramaiah in BJP parivartan rally at Kittur, Belagavi district.. The Mysuru district congress president B.J Vijayakumar has filed the complaint in Mysuru JMFC court. The Complaint transperd to Kittur police station said Mysuru Sp Dr. A.S Subramanyeswar.