ಪತ್ರಕರ್ತ ರವಿ ಬೆಳಗೆರೆ ಅವರು ಹಾಯ್ ಬೆಂಗಳೂರು ಪತ್ರಿಕೆಯ ಮಾಜಿ ಸಹೋದ್ಯೋಗಿ ಸುನೀಲ್ ಹೆಗ್ಗರವಳ್ಳಿ ಅವರ ಕೊಲೆಗೆ ಸುಪಾರಿ ನೀಡಿದ ಪ್ರಕರಣದ ಬಗ್ಗೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ಟಿ ಸುನೀಲ್ ಕುಮಾರ್ ಅವರು ಶುಕ್ರವಾರ ಸಂಜೆ ಸುದ್ದಿಗೋಷ್ಠಿ ನಡೆಸಿ ವಿವರಗಳನ್ನು ನೀಡಿದರು. ಬೆಂಗಳೂರು ಕ್ರೈಂ ವಿಭಾಗದ ಹೆಚ್ಚುವರಿ ಆಯುಕ್ತ ಸತೀಶ್ ಕುಮಾರ್ ಅವರ ನೇತೃತ್ವದ ಸಿಸಿಬಿ ಪೊಲೀಸರು ಶುಕ್ರವಾರ ಮಧ್ಯಾಹ್ನ ವೇಳೆಗೆ ಬೆಂಗಳೂರಿನ ಪದ್ಮನಾಭನಗರದಲ್ಲಿರುವ 'ಹಾಯ್ ಬೆಂಗಳೂರು' ಕಚೇರಿ ಮೇಲೆ ದಾಳಿ ನಡೆಸಿದರು. ಈ ವೇಳೆ ಹಲವಾರು ವಸ್ತುಗಳನ್ನು ವಶಪಡಿಸಿಕೊಳ್ಳಲಾಯಿತು ಎಂದು ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ಹೇಳಿದರು. ಈ ಪ್ರಕರಣ ಆರೋಪಿ ತಾಹೀರ್ ಹುಸೇನ್ ನೀಡಿದ ಮಾಹಿತಿ ಮೇಲೆ ಸಿಸಿಬಿ ಪೊಲೀಸರು ಸರ್ಚ್ ವಾರೆಂಟ್ ಪಡೆದು ರವಿ ಬೆಳಗೆರೆ ಅವರ ಕಚೇರಿ, ಮನೆ ಮೇಲೆ ದಾಳಿ ನಡೆಸಿದರು.
city police commissioner T Sunil kumar spoke to media and updated us about the sunil heggaravalli supari case