ಅಂದುಕೊಂಡದ್ದಕ್ಕಿಂತ ಮುಂಚೆಯೇ ನಡೆಯಲಿದೆ 'ಕುರುಕ್ಷೇತ್ರ' ಯುದ್ಧ | Filmibeat Kannada

2017-12-14 1,019

ಮುನಿರತ್ನ ನಿರ್ಮಾಣದ 'ಕುರುಕ್ಷೇತ್ರ' ಚಿತ್ರದ ಶೂಟಿಂಗ್ ಭರದಿಂದ ಸಾಗಿದೆ. ಬಹುಕೋಟಿ ವೆಚ್ಚದ ಅದ್ದೂರಿ ಸಿನಿಮಾ ಇದಾಗಿದ್ದು, ಕನ್ನಡ ಚಿತ್ರರಂಗದಲ್ಲೇ ಹೊಸ ಇತಿಹಾಸವನ್ನು ಬರೆಯಲಿದ್ದಾರೆ ನಿರ್ಮಾಪಕರಾದ ರಾಕ್ ಲೈನ್ ವೆಂಕಟೇಶ್ ಹಾಗೂ ಮುನಿರತ್ನ. ಇನ್ನು ಅಂದುಕೊಂಡಂದಕ್ಕಿಂತ ಮುಂಚಿತವಾಗಿಯೇ ಚಿತ್ರೀಕರಣ ಮುಗಿಸಲು ನಿರ್ದೇಶಕ ನಾಗಣ್ಣ ಪ್ಲಾನ್ ಮಾಡಿದ್ದಾರೆ. ಫೆಬ್ರವರಿಯಲ್ಲಿ ಸಿನಿಮಾ ರಿಲೀಸ್ ಮಾಡಬೇಕೆಂದು ಯೋಚಿಸಿದ ಚಿತ್ರತಂಡ ಅದಕ್ಕೂ ಮುಂಚಿತವಾಗಿಯೇ ಚಿತ್ರವನ್ನು ರಿಲೀಸ್ ಮಾಡುವ ಸಾಧ್ಯತೆಗಳು ಹೆಚ್ಚಾಗಿವೆ. ಮಾಮೂಲಿ ಕಮರ್ಶಿಯಲ್ ಸಿನಿಮಾಗಳಿಗೂ 'ಕುರುಕ್ಷೇತ್ರ' ಚಿತ್ರಕ್ಕೂ ಸಾಕಷ್ಟು ವ್ಯತ್ಯಾಸವಿದ್ದು ನೂರಾರು ತಂತ್ರಜ್ಞರು 'ಕುರುಕ್ಷೇತ್ರ' ಚಿತ್ರಕ್ಕಾಗಿ ಹಗಲಿರುಳು ಕೆಲಸ ಮಾಡುತ್ತಿದ್ದಾರೆ.ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 'ಕುರುಕ್ಷೇತ್ರ' ಸಿನಿಮಾ ಫೆಬ್ರವರಿಯಲ್ಲಿ ತೆರೆಗೆ ಬರಲಿದೆ ಎನ್ನುವ ಮಾತುಗಳು ಕೇಳಿ ಬಂದಿತ್ತು. ಆದರೆ ಮೂಲಗಳ ಪ್ರಕಾರ ವರ್ಷದ ಪ್ರಾರಂಭದಲ್ಲಿ ಅಂದರೆ ಜನವರಿ ಅಂತ್ಯಕ್ಕೆ ಚಿತ್ರ ಬಿಡುಗಡೆಯಾಗುವ ಸಾಧ್ಯತೆಗಳು ಹೆಚ್ಚಾಗಿದೆಯಂತೆ.'ಕುರುಕ್ಷೇತ್ರ' ಚಿತ್ರದಲ್ಲಿ ದುರ್ಯೋಧನ ಹಾಗೂ ಭೀಮನ ಮಧ್ಯೆ ನಡೆಯುವ ಯುದ್ಧನ ದೃಶ್ಯಗಳ ಚಿತ್ರೀಕರಣದಲ್ಲಿ ಸಿನಿಮಾ ತಂಡ ಭಾಗಿಯಾಗಿದೆ. ಕಣಲ್ ಕಣ್ಣನ್ ಸಾಹಸ ನಿರ್ದೇಶನ ಮಾಡುತ್ತಿದ್ದಾರೆ.

one of the best movie upcoming movie is kurukshethra, Actor P Ravi Shankar is playing the role of Shakuni in this movie. Directed by film director Naganna.Challenging star Darshan's Kurukshetra movie is likely to be released by the end of January 2018.