ಬಿಜೆಪಿ ನಾಯಕ ಯೋಗೀಶ್ ಗೌಡ ಪತ್ನಿ ಮಲ್ಲಮ್ಮ ಕಾಂಗ್ರೆಸ್ ಗೆ ಸೇರ್ಪಡೆ | Oneindia Kannada

2017-12-21 12

BJP Leader Yogish Gowda wife Mallamma joined Congress on December 20, 2017. Yogish Gowda BJP leader and member of Dharwad Zilla Panchayat who was hacked to death on 2016.


ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಪತ್ನಿ ಮಲ್ಲಮ್ಮ ಕಾಂಗ್ರೆಸ್ ಸೇರಿದ್ದಾರೆ. ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಹೋರಾಟ ನಡೆಸುತ್ತಿದ್ದ ಬಿಜೆಪಿಗೆ ಇದರಿಂದ ಹಿನ್ನಡೆಯಾಗಿದೆ. ಬೆಳಗಾವಿಯಲ್ಲಿ ಬುಧವಾರ ಸಂಜೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಸಮ್ಮುಖದಲ್ಲಿ ಮಲ್ಲಮ್ಮ ಕಾಂಗ್ರೆಸ್ ಸೇರಿದರು. ಮಲ್ಲಮ್ಮ ಇಂದು ಬೆಳಗ್ಗೆ ವಿಜಯಪುರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದರು. ಆಗ ಕಾಂಗ್ರೆಸ್ ಸೇರುವುದಾಗಿ ಹೇಳಿದ್ದರು.ಮಲ್ಲಮ್ಮ ಭೇಟಿ ಬಳಿಕ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 'ಈ ತರಹ ಹೇಳಿಕೆ ಕೊಡಿ, ಆ ಥರ ಹೇಳಿಕೆ ಕೊಡಿ ಎಂದು ಬಿಜೆಪಿಯವರು ನನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಮಲ್ಲಮ್ಮ ಹೇಳಿದ್ದಾರೆ. ರಕ್ಷಣೆ ಕೇಳಿದ್ದಾರೆ, ರಕ್ಷಣೆ ನೀಡುವುದಾಗಿ ಹೇಳಿದ್ದೇನೆ' ಎಂದು ತಿಳಿಸಿದ್ದರು.ಧಾರವಾಡದ ಜಿಲ್ಲಾ ಪಂಚಾಯಿತಿ ಸದಸ್ಯ, ಬಿಜೆಪಿ ನಾಯಕ ಯೋಗೀಶ್ ಗೌಡ ಅವರನ್ನು ಜೂನ್ 15, 2016 ರಂದು ಹತ್ಯೆ ಮಾಡಲಾಗಿತ್ತು. ಬೆಳ್ಳಂಬೆಳಗ್ಗೆ ಜಿಮ್‌ನಲ್ಲಿ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಹತ್ಯೆ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿಯೂ ಭಾರೀ ಚರ್ಚೆ ನಡೆದಿತ್ತು.

Videos similaires