ಹೊಸ ವರ್ಷಾಚರಣೆ : ಬೆಂಗಳೂರು ನಗರದ ಪೊಲೀಸ್ ಆಯುಕ್ತ ಟಿ. ಸುನೀಲ್ ಕುಮಾರ್ ಸಂದರ್ಶನ | Oneindia Kannada

2017-12-29 306

Bengaluru police commissioner Sunil Kumar has decided to deploy around 15 thousand police personnel during new year celebration in Bengaluru. In particular MG road and Brigade road to avoid untoward incidents following the last year experience.

ಕಳೆದ ವರ್ಷ ವರ್ಷಾಚರಣೆ ವೇಳೆ ನಡೆದ ಕಹಿ ಘಟನೆಗಳಿಂದ ಎಚ್ಚೆತ್ತಿರುವ ಪೊಲೀಸರು ಈ ವರ್ಷ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಹಾಗೂ ಚರ್ಚ ಸ್ಟ್ರೀಟ್ ಗಳಲ್ಲಿ ಬಿಗಿ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದು ನಗರಾದ್ಯಂತ 15 ಸಾವಿರ ಪೊಲೀಸರನ್ನು ನಿಯೋಜಿಸಲು ತೀರ್ಮಾನಿಸಿದ್ದಾರೆ.ನಗರದಲ್ಲಿ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಬಂದೋಬಸ್ತ್ ಕೈಗೊಳ್ಳಲಾಗಿದೆ. ಆಚರಣೆ ನೆಪದಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ಸಾರ್ವಜನಿಕರ ಜತೆ ಅನುಚಿತವಾಗಿ ವರ್ತಿಸುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುತ್ತದೆ. ಅಲ್ಲದೇ, ನಗರದ ಹೊಸ ವರ್ಷಾಚರಣೆಯ ಕೇಂದ್ರ ಬಿಂದುವಾದ ಬ್ರಿಗೇಡ್ ರಸ್ತೆಯಲ್ಲಿ ಸ್ಥಳಾವಕಾಸ ಲಭ್ಯತೆಗೆ ಅನುಸಾರವಾಗಿ ನಿರ್ಭಂದಗಳನ್ನು ಹೇರಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ತಿಳಿಸಿದ್ದಾರೆ.ಎಂಜಿ ರಸ್ತೆ ಬ್ರಿಗೇಡ್ ರಸ್ತೆಯಲ್ಲಿ2500 ಪೊಲೀಸ್: ನಗರದ ಹೊಸ ವರ್ಷಾಚರಣೆಯ ಕೇಂದ್ರ ಸ್ಥಳ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಮತ್ತು ಚರ್ಚ್ ಸ್ಟ್ರೀಟ್ ಗಳಲ್ಲಿ ಎರಡೂವರೆ ಸಾವಿರ ಪೊಲೀಸರನ್ನು ನಿಯೋಜಿಸಲಾಗುತ್ತಿದೆ ಅದರಲ್ಲಿ ಮಫ್ತಿ ಪೊಲೀಸರು ಹಾಗೂ ಮಹಿಳಾ ಪೊಲೀಸ್ ಸಿಬ್ಬಂದಿಯೂ ಇರಲಿದ್ದಾರೆ.ಈ ಹೊಸವರ್ಷಾಚರಣೆ ಬಗ್ಗೆ ಬೆಂಗಳೂರು ನಗರ ಹೆಚ್ಚುವರಿ ಆಯುಕ್ತ ಟಿ ಸುನಿಲ್ ಕುಮಾರ್ ನಮ್ಮ ಒನ್ ಇಂಡಿಯಾ ಕನ್ನಡಕ್ಕೆ ಸಂದರ್ಶನ ನೀಡಿದ್ದಾರೆ.