ಚಿತ್ರರಂಗದ ಸೂಪರ್ ಸ್ಟಾರ್ ತಲೈವಾ ರಜನಿಕಾಂತ್ ರಾಜಕೀಯಕ್ಕೆ ಬರುವುದನ್ನ ಕನ್ಫರ್ಮ್ ಮಾಡಿದ್ದಾರೆ. ಚೆನೈನ ರಾಘವೇಂದ್ರ ಹಾಲ್ ನಲ್ಲಿ ಅಭಿಮಾನಿಗಳ ಜೊತೆ ನಡೆಸುತ್ತಿರುವ ಸಂವಾದದಲ್ಲಿ ರಜನಿ ಪೊಲಿಟಿಕ್ಸ್ ಗೆ ಎಂಟ್ರಿ ಕೊಡುವುದನ್ನ ಖಚಿತ ಪಡಿಸಿದ್ದಾರೆ. ರಜನಿಕಾಂತ್ ರಾಜಕೀಯಕ್ಕೆ ಬರುವುದು ಅಭಿಮಾನ ಗಳಿಗೆ ಖುಷಿ ಕೊಟ್ಟಿದೆ. ಸಂತೋಷದ ಜೊತೆಗೆ ನೋವನ್ನು ನೀಡಿದೆ. ರಜನಿಕಾಂತ್ ಇನ್ನು ಮುಂದೆ ಸಂಪೂರ್ಣವಾಗಿ ರಾಜಕೀಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಆದ್ದರಿಂದ ಸಿನಿಮಾಗಳಲ್ಲಿ ಅಭಿನಯಿಸುವುದು ಡೌಟ್ ಅನ್ನುವ ಸುದ್ದಿ ಹರಿದಾಡುತ್ತಿದೆ.ರಜನಿಕಾಂತ್ ರಾಜಕೀಯ ರಂಗಕ್ಕೆ ಪ್ರವೇಶ ಮಾಡುತ್ತಿರುವ ಬಗ್ಗೆ ಖಾಸಗಿ ವಾಹಿನಿಯ ಜೊತೆ ಮಾತನಾಡಿದ ಸಹೋದರ ಸತ್ಯನಾರಾಯಣ್ ರಾವ್ ರಜನಿ ಇನ್ನು ಮುಂದೆ ಚಿತ್ರಗಳಲ್ಲಿ ಅಭಿನಯಿಸುವುದಿಲ್ಲ ಎಂದಿದ್ದಾರೆ.ಒಂದು ತಿಂಗಳ ಹಿಂದೆ ಮ ತ್ರಾಲಯಕ್ಕೆ ಭೇಟಿ ನೀಡುವ ಮುನ್ನ ಸಹೋದರ ಸತ್ಯನಾರಾಯಣ್ ಅವರನ್ನ ಮನೆಗೆ ಬಂದಿದ್ದ ರಜನಿಕಾಂತ್ ರಾಜಕೀಯ ಪ್ರವೇಶದ ಬಗ್ಗೆ ಚರ್ಚೆ ಮಾಡಿದ್ದರಂತೆ.