ಚುನಾವಣೆ 'ಕಟ್ಟೆ'ಯಿಂದಿಳಿಯಲು ರವಿಗೆ ಅಭ್ಯಂತರವಿಲ್ಲ | Oneindia Kannada

2018-01-22 7

'ಕಟ್ಟೆ ಸತ್ಯನಾರಾಯಣ ಅವರು ಬಸವನಗುಡಿ ಕ್ಷೇತ್ರದ ಟಿಕೆಟ್‌ ಕೇಳಿದ್ದಾರೆ. ಅದು ತಪ್ಪಲ್ಲ. ರಾಜಕೀಯದಲ್ಲಿರುವ ಪ್ರತಿಯೊಬ್ಬರಿಗೂ ಆಸೆ ಇರುತ್ತದೆ, ಅಂತಿಮ ನಿರ್ಧಾರವನ್ನು ಪಕ್ಷ ತೆಗೆದುಕೊಳ್ಳಬೇಕು' ಎಂದು ಬಸವನಗುಡಿ ಕ್ಷೇತ್ರದ ಶಾಸಕ ರವಿ ಸುಬ್ರಮಣ್ಯ ಹೇಳಿದರು. ಬೆಂಗಳೂರಿನ ಬಸವನಗುಡಿ ಕ್ಷೇತ್ರದಿಂದ ಎಲ್.ಎ.ರವಿ ಸುಬ್ರಮಣ್ಯ ಅವರು 2008, 2013ರ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈ ಬಾರಿಯೂ ಅವರಿಗೆ ಟಿಕೆಟ್ ನಿರಾಕರಿಸಲು ಬಿಜೆಪಿಯ ಬಳಿ ಕಾರಣಗಳು ಇಲ್ಲ.

ಆದರೆ, ಟಿಕೆಟ್‌ಗಾಗಿ ಬಿಜೆಪಿ ನಾಯಕರೊಬ್ಬರು ಬೇಡಿಕೆ ಇಟ್ಟಿದ್ದಾರೆ. ಸಂದರ್ಶನ : ಟಿಕೆಟ್ ಬೇಕೇಬೇಕು ಎಂದು ಪಟ್ಟು ಹಿಡಿದಿರುವ ಕಟ್ಟೆ ಸತ್ಯ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಾಜಿ ಮೇಯರ್ ಮತ್ತು ಬಸವನಗುಡಿ ಕ್ಷೇತ್ರದ ಬಿಬಿಎಂಪಿ ಸದಸ್ಯ ಕಟ್ಟೆ ಸತ್ಯನಾರಾಯಣ ಅವರು ಬಸವನಗುಡಿ ವಿಧಾನಸಭಾ ಕ್ಷೇತ್ರದ ಟಿಕೆಟ್‌ಗೆ ಬೇಡಿಕೆ ಇಟ್ಟಿದ್ದಾರೆ. ಬಹಿರಂಗವಾಗಿ ಈ ಕುರಿತು ಹೇಳಿಕೆ ನೀಡಿದ್ದಾರೆ.

ಒನ್ ಇಂಡಿಯಾ ಕನ್ನಡಕ್ಕೆ ನೀಡಿದ ಸಂದರ್ಶನದಲ್ಲಿ ಶಾಸಕ ಎಲ್.ಎ.ರವಿ ಸುಬ್ರಮಣ್ಯ ಅವರು ಕಟ್ಟೆ ಸತ್ಯನಾರಾಯಣ ಅವರ ಬೇಡಿಕೆ, ಕ್ಷೇತ್ರದ ಅಭಿವೃದ್ಧಿ, ಸಾಮಾಜಿಕ ಜಾಲತಾಣಗಳ ಬಳಕೆ ಬಗ್ಗೆ ಮಾತನಾಡಿದ್ದಾರೆ. ಸಂದರ್ಶನದ ವಿವರಗಳು ಇಲ್ಲಿವೆ

Videos similaires