'ವಯಸ್ಸಿನ ಕಾರಣದಿಂದ ಮುಂದಿನ ಚುನಾವಣೆಗೆ ಸ್ಪರ್ಧಿಸುವುದಿಲ್ಲ' ಎಂದು ಯಾದಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ.ಎ.ಬಿ.ಮಾಲಕರಡ್ಡಿ ಘೋಷಣೆ ಮಾಡಿದ್ದಾರೆ.
ಯಾದಗಿರಿಯಲ್ಲಿ ಮಾತನಾಡಿದ ಡಾ.ಎ.ಬಿ.ಮಾಲಕರಡ್ಡಿ ಅವರು, 'ವಯಸ್ಸಾದ ಹಿನ್ನಲೆಯಲ್ಲಿ ಚುನಾವಣೆಗೆ ಸ್ಪರ್ಧಿಸದಿರಲು ತೀರ್ಮಾನಿಸಿದ್ದೇನೆ. ಮತದಾರರು, ಅಭಿಮಾನಿಗಳು ಒತ್ತಾಯ ಮಾಡಿದರು ಸ್ಪರ್ಧಿಸುವುದಿಲ್ಲ. ಆದರೆ, ಸಕ್ರಿಯ ರಾಜಕಾರಣದಲ್ಲಿ ಮುಂದುವರೆಯುತ್ತೇನೆ' ಎಂದು ಹೇಳಿದ್ದಾರೆ.
'ನಾನು ಸ್ಪರ್ಧಿಸುವುದಿಲ್ಲ. ನಮ್ಮ ಕುಟುಂಬದವರು ಯಾರೂ ಸಹ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ' ಎಂದು ಡಾ.ಎ.ಬಿ.ಮಾಲಕರಡ್ಡಿ ಅವರು ಸ್ಪಷ್ಟಪಡಿಸಿದ್ದಾರೆ.ಡಾ.ಎ.ಬಿ.ಮಾಲಕರಡ್ಡಿ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ, 'ಯಾವು ಯಾವುದೇ ಪಕ್ಷವನ್ನು ಸೇರುತ್ತಿಲ್ಲ' ಎಂದು ಹೇಳುವ ಮೂಲಕ ಮಾಲಕರಡ್ಡಿ ಅವರು ಬಿಜೆಪಿ ಸೇರ್ಪಡೆ ವದಂತಿಯನ್ನು ತಳ್ಳಿ ಹಾಕಿದರು.ಬೆಳಗಾವಿಯಲ್ಲಿ ಅಧಿವೇಶ ನಡೆಯುವಾಗಿ 'ನಿಮ್ಮ ಆಡಳಿತ ಅವಧಿಯಲ್ಲಿ ಆಗಿರುವ ಅವಮಾನ ಸಾಕು. ಕಾಂಗ್ರೆಸ್‌ಗೆ ರಾಜೀನಾಮೆ ಕೊಟ್ಟು ಹೋಗುವೆ' ಎಂದು ಎ.ಬಿ.ಮಾಲಕ ರಡ್ಡಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದೆಯೇ ಹೇಳಿಕೆ ನೀಡಿ ಸುದ್ದಿ ಮಾಡಿದ್ದರು.
Yadgir Congress MLA Dr.A.B.Malakareddy said he will not contest for 2018 assembly elections and he denied the report that he will join BJP.