ಬಡವರಿಂದ ಹಿಡಿದು ಶ್ರೀಮಂತ ಜನರ ಅಪಾರ ನಿರೀಕ್ಷೆಗಳ ಮೂಟೆಯನ್ನು ಹೊತ್ತುಕೊಂಡು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿಯವರು ಫೆಬ್ರವರಿ 1ರ ಗುರುವಾರದಂದು 2018-19ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದಾರೆ. ಬಜೆಟ್ಟಿನಲ್ಲಿ ಕೃಷಿ ಉದ್ಯಮ ಮತ್ತು ಗ್ರಾಮೀಣ ಜನತೆಯನ್ನು ಗಮನದಲ್ಲಿಟ್ಟುಕೊಂಡು ಅರುಣ್ ಜೇಟ್ಲಿಯವರು ಹಲವಾರು ಯೋಜನೆಗಳನ್ನು ಹರಿಯಬಿಟ್ಟಿದ್ದಾರೆ. ಕೃಷಿಯನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಕಡೆಗಣಿಸುತ್ತಿದೆ ಎಂದು ವಿರೋಧಿಗಳಿಂದ ಸಾಕಷ್ಟು ಟೀಕೆಗಳು ಕೇಳಿಬಂದಿದ್ದವು.