ತಮಿಳುನಾಡಿನ ವಿಶ್ವವಿಖ್ಯಾತ ಮದುರೈ ಮೀನಾಕ್ಷಿ ದೇವಾಲಯದಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದೆ. ಇಂದು(ಫೆ.3) ಬೆಳಿಗ್ಗೆ ದೇವಾಲಯದ ಆವರಣದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ಅಗ್ನಿ ಶಾಮಕ ದಳದ ಸಿಬ್ಬಂದಿ ಆಗಮಿಸಿ, ಬೆಂಕಿ ಆರಿಸುವ ಕಾರ್ಯಾಚರಣೆ ಆರಂಬಿಸಿದ್ದರಿಂದ ಹೆಚ್ಚಿನ ಹಾನಿ ಸಂಭವಿಸಿಲ್ಲ ಎಂಬ ಮಾಹಿತಿ ದೊರಕಿದೆ.