KSRTC bus driver, named Moinuddin has been confessed in hit and run case near Ramnagar. After the accident he was kept hide the case and the body was found in the bus in Shantinagar depot yesterday.
ಶಾಂತಿನಗರ ಒಂದನೇ ಡಿಪೋದಲ್ಲಿ ಪತ್ತೆಯಾದ ಅಪರಿಚಿತ ವ್ಯಕ್ತಿ ಶವ ಪ್ರಕರಣ, ತಾನೇ ಅಪಘಾತ ಮಾಡಿರುವುದಾಗಿ ಕೆಎಸ್ ಆರ್ ಟಿಸಿ ಬಸ್ ಚಾಲಕ ಮೊಯಿನುದ್ದೀನ್ ತಪ್ಪೊಪ್ಪಿಕೊಂಡಿದ್ದಾರೆ. ಶಾಂತಿನಗರ ಒಂದನೇ ಡಿಪೋದಲ್ಲಿ ಪತ್ತೆಯಾದ ಅಪರಿಚಿತ ವ್ಯಕ್ತಿ ಶವ, ಅಪಘಾತದಿಂದ ಮೃತಪಟ್ಟಿರುವುದಾಗಿ ತನಿಖೆ ವೇಳೆ ತಿಳಿದುಬಂದಿತ್ತು.ಅಪಘಾತ ನಡೆದ ಸ್ಥಳದಲ್ಲಿ ಬಸ್ ನಿಲ್ಲಿಸದೆ ಬಸ್ ಚಾಲಕ ಬಸ್ ಚಲಾಯಿಸಿಕೊಂಡು ಬಂದು, ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ದ, ಚಾಲಕ ಮೊಯಿನುದ್ದೀನ್ ವಿರುದ್ಧ ಸಾಕ್ಷ್ಯ ನಾಶಕ್ಕೆ ಯತ್ನ ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ಮೂರು ದಿನ ವಶಕ್ಕೆ ಪಡೆಯಲಾಗಿದೆ.