The Janata Dal (Secular) invites Congress party for the alliance in Rajya Sabha polls scheduled on March 23, 2018. Election will be held to elect 4 members form Karnataka assembly.
ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆ ನಡೆಯುವ ಸಾಧ್ಯತೆ ಇದೆ. ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್ ಬಯಸಿದೆ. ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ 4 ಸದಸ್ಯರನ್ನು ಆಯ್ಕೆ ಮಾಡಲು ಮಾರ್ಚ್ 23ರಂದು ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಒಬ್ಬ ಸದಸ್ಯರನ್ನು ರಾಜ್ಯಸಭೆಗೆ ಕಳುಹಿಸಲು ಜೆಡಿಎಸ್ ಸಿದ್ಧತೆ ನಡೆಸುತ್ತಿದೆ.