ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ 20 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಮೈಸೂರು ಎಸ್ಪಿಯಾಗಿದ್ದ ರವಿ ಡಿ.ಚನ್ನಣ್ಣನವರ್ ಅವರನ್ನು ಬೆಂಗಳೂರು ಪಶ್ಚಿಮ ವಲಯ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಕರ್ನಾಟಕ ಸರ್ಕಾರ ಶುಕ್ರವಾರ 20 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಹಲವು ಜಿಲ್ಲೆಗಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಬದಲಾವಣೆಯಾಗಿದ್ದಾರೆ.