ಬಾಗಲಕೋಟೆ, ಏಪ್ರಿಲ್ 03 : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬಾಗಲಕೋಟೆಯ ಶಿವಯೋಗ ಮಂದಿರಕ್ಕೆ ಭೇಟಿ ನೀಡಿದರು. ಎರಡು ದಿನಗಳ ಪ್ರವಾಸಕ್ಕಾಗಿ ಅಮಿತ್ ಶಾ ಕರ್ನಾಟಕಕ್ಕೆ ಆಗಮಿಸಿದ್ದಾರೆ. ಮಂಗಳವಾರ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕಿನಲ್ಲಿರುವ ಶಿವಯೋಗ ಮಂದಿರಕ್ಕೆ ಅಮಿತ್ ಶಾ ಭೇಟಿ ನೀಡಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಸಂಸದ ಪ್ರಹ್ಲಾದ್ ಜೋಶಿ, ವಿಧಾನ ಸಭೆ ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.