ಉಡುಪಿ, ಏಪ್ರಿಲ್ 21 :ಪಕ್ಷೇತರ ಅಭ್ಯರ್ಥಿಯಾಗಿ ಶೀರೂರು ಮಠದ ಲಕ್ಷ್ಮೀವರ ತೀರ್ಥ ಶ್ರೀಗಳು ಕಣಕ್ಕೆ ಧುಮುಕಿರುವುದರಿಂದ ಉಡುಪಿ ವಿಧಾನಸಭೆ ಕ್ಷೇತ್ರ ರಂಗೇರಿದೆ. ಇವತ್ತು ಪಕ್ಷೇತರ ಅಭ್ಯರ್ಥಿಯಾಗಿ ಶ್ರೀಗಳು ಉಮೇದುವಾರಿಕೆ ಸಲ್ಲಿಸಿದರು. ಮಧ್ಯಾಹ್ನ ಹನ್ನೆರಡೂವರೆ ಗಂಟೆ ಸುಮಾರಿಗೆ ತಾಲೂಕು ಕಚೇರಿಗೆ ಆಗಮಿಸಿದ ಶ್ರೀಗಳು ಚುನಾವಾಧಿಕಾರಿಗಳಿಗೆ ನಾಮಪತ್ರ ನೀಡಿದರು.