ಮಂಡ್ಯ ಜಿಲ್ಲೆ ಮೇಲುಕೋಟೆಯಲ್ಲಿ ಚುನಾವಣಾ ಕಾವು ತಾರಕಕ್ಕೇರಿದೆ. ಜೆಡಿಎಸ್ ಮತ್ತು ಸ್ವರಾಜ್ ಇಂಡಿಯಾ ಪಕ್ಷದ ಅಭ್ಯರ್ಥಿಯ ನಡುವೆ ಇಲ್ಲಿ ನೇರ ಫೈಟ್. ಇಡೀ 224ಕ್ಷೇತ್ರಗಳಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಇರುವ ಏಕೈಕ ಕ್ಷೇತ್ರವೆಂದರೆ ಅದು ಮೇಲುಕೋಟೆ. ಚುನಾವಣೆಯ ಸಂದರ್ಭದಲ್ಲಿ ಮೇಲುಕೋಟೆ ಅಸೆಂಬ್ಲಿ ಕ್ಷೇತ್ರದಲ್ಲಿ ಸುತ್ತಾಡಿದಾಗ ಇಲ್ಲಿ ಮೇಲ್ನೋಟಕ್ಕೆ ಕಾಣಿಸುತ್ತಿರುವುದು ಜೆಡಿಎಸ್ ಪಕ್ಷದ ಹಿರಿಯ ಮುಖಂಡ, ಹಾಲೀ ಮಂಡ್ಯ ಸಂಸದ ಮತ್ತು ಈ ಬಾರಿ ಇಲ್ಲಿನ ಅಭ್ಯರ್ಥಿ ಸಿ ಎಸ್ ಪುಟ್ಟರಾಜು ಮತ್ತು ಸ್ವರಾಜ್ ಇಂಡಿಯಾ ಪಕ್ಷದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ನಡುವೆ. ತಂದೆ, ರೈತ ನಾಯಕ ಕೆ ಎಸ್ ಪುಟ್ಟಣ್ಣಯ್ಯ ಅವರ ಅಕಾಲಿಕ ನಿಧನದ ನಂತರ, ತೀವ್ರ ಒತ್ತಡ ವ್ಯಕ್ತವಾದ ಹಿನ್ನಲೆಯಲ್ಲಿ ರಾಜಕೀಯಕ್ಕೆ ಧುಮುಕಿದ ದರ್ಶನ್, ಅಮೆರಿಕಾದಲ್ಲಿ Qwinix ಟೆಕ್ನಾಲಜೀಸ್ ಸಂಸ್ಥೆಯ ಸಂಸ್ಥಾಪಕ ಮತ್ತು ಸಿಇಓ.