ಒಂದು ವಾರ ಕಾಲ ವಿವಿಧ ಅಭ್ಯರ್ಥಿಗಳ ಪರವಾಗಿ, ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ನಟ ಯಶ್ ಚುನಾವಣಾ ಪ್ರಚಾರಕ್ಕೆ ಸ್ಟಾರ್ ರಂಗು ತುಂಬಲಿದ್ದಾರೆ' ಎಂಬ ಸುದ್ದಿ ಕೇಳಿ ರಾಕಿಂಗ್ ಸ್ಟಾರ್ ಅಭಿಮಾನಿಗಳು ಥ್ರಿಲ್ ಆಗಿದ್ದರು. ಆದರೆ, ಯಶ್ ಅವರು ಯಾವ್ಯಾವ ಪಕ್ಷದ ಯಾವ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಮಾಡ್ತಾರೆ, ಮತಯಾಚಿಸಲಿದ್ದಾರೆ ಎಂಬ ಕುತೂಹಲ ಇದ್ದೇ ಇತ್ತು. ಈಗ ಈ ಕುತೂಹಲಕ್ಕೆ ತೆರೆ ಬಿದ್ದಿದೆ.