JDS fell in love with Elephant (BSP), dating with Owasi and now married to congress said, ex DCM, BJP MLA R Ashok. He also insists former chief minister Siddaramaiah should retire from politics as he was defeated in his home constituency.
ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಯನ್ನು ಖಂಡಿಸಿ ಕರಾಳ ದಿನ ಆಚರಿಸುತ್ತಿರುವ ಬಿಜೆಪಿ, ಬುಧವಾರ ರಾಜ್ಯದಾದ್ಯಂತ ಪ್ರತಿಭಟನೆಗಳನ್ನು ನಡೆಸುತ್ತಿದೆ. ಬೆಂಗಳೂರಿನ ಮೌರ್ಯ ವೃತ್ತದಲ್ಲಿ ಪಕ್ಷದ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಸಮ್ಮಿಶ್ರ ಸರ್ಕಾರದ ರಚನೆ ವಿರುದ್ಧ ಘೋಷಣೆಗಳನ್ನು ಕೂಗಿದರು.