In a surprising statement former chief minister Siddaramaiah has said that he will become chief minister again as people will definitely bless him
ಮತ್ತೆ ಮುಖ್ಯಮಂತ್ರಿಯಾಗುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸ ಬಾಂಬ್ ಸಿಡಿಸಿದ್ದಾರೆ. ಈ ಹೇಳಿಕೆ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ರಾಜಕೀಯ ಎನ್ನುವುದು ಇಂದಿನ ದಿನಗಳಲ್ಲಿ ಹಣ, ಜಾತಿಯ ಆಧಾರದ ಮೇಲೆ ನಿಂತಿದೆ, ಇದು ರಾಜಕೀಯ ಕ್ಷೇತ್ರದಲ್ಲಿ ಒಳ್ಳೆಯ ಬೆಳವಣಿಗೆ ಎನಿಸಿಕೊಳ್ಳುವುದಿಲ್ಲ, ಒಂದು ಹುದ್ದೆಯನ್ನು ಅಲಂಕರಿಸಿದ ಮೇಲೆ ಎಲ್ಲ ಜಾತಿ, ಧರ್ಮದ ಪರವಾಗಿಯೂ ಕೆಲಸ ಮಾಡಬೇಕಾಗುತ್ತದೆ. ಜನರು ಮತ್ತೆ ನನಗೆ ಆಶೀರ್ವಾದ ಮಾಡುತ್ತಾರೆ, ನಾನು ಸಿಎಂ ಆಗೇ ಆಗುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಾಜಕೀಯದಲ್ಲಿ ನಾನು ಯಾರಿಗೂ ಹೆದರುವುದಿಲ್ಲ, ಮುಂದೆಯೂ ಹೋರಾಡುತ್ತೇನೆ ಎಂದಿದ್ದಾರೆ..