Municipality and Local Bodies Minister Ramesh Jarkiholi attacked against on Minister D.K.Shiva Kumar for his interference in Belagavi district politics. Dispute between Lakshmi Hebbalkar and Satish Jarkiholi, Ramesh Jarkiholi over control on district politics yet to resolved.
ಬೆಳಗಾವಿ ಜಿಲ್ಲಾ ಕಾಂಗ್ರೆಸ್‌ನಲ್ಲಿನ ಅಸಮಾಧಾನ ಇನ್ನೂ ಬಗೆಹರಿದಿಲ್ಲ. 'ಡಿ.ಕೆ.ಶಿವಕುಮಾರ್ ಬೆಳಗಾವಿ ಜಿಲ್ಲಾ ರಾಜಕೀಯ ಬೆಳವಣಿಗೆಯಲ್ಲಿ ಹಸ್ತಕ್ಷೇಪ ಮಾಡುವುದು ತಪ್ಪು' ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ, ಶಾಸಕ ಸತೀಶ್ ಜಾರಕಿಹೊಳಿ ಅವರ ಬಗ್ಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮುನಿಸಿಕೊಂಡಿದ್ದಾರೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಸಹ ಈ ಬಿಕ್ಕಟ್ಟು ಬಗೆಹರಿಸಲು ಪ್ರಯತ್ನ ನಡೆಸಿದ್ದಾರೆ.