408ನೇ ಮೈಸೂರು ದಸರಾ: ಅರಮನೆಯಲ್ಲಿ ಖಾಸಗಿ ದರ್ಬಾರ್ ಆರಂಭ | Oneindia Kannada

2018-10-10 350

ನಾಡಹಬ್ಬ ಮೈಸೂರು ದಸರಾಕ್ಕೆ ಸಾಂಪ್ರದಾಯಿಕ ಚಾಲನೆ ದೊರೆತಿದ್ದು, ಖಾಸಗಿ ದರ್ಬಾರ್ ಅಂಬಾವಿಲಾಸ ಅರಮನೆಯಲ್ಲಿ ವೈಭವದಿಂದ ಆರಂಭವಾಗಿದೆ. ಯದುವಂಶದ ಉತ್ತರಾಧಿಕಾರಿ ಹಾಗೂ ಪ್ರಮೋದಾದೇವಿ ಅವರ ದತ್ತು ಪುತ್ರ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ರತ್ನಖಚಿತ ಸಿಂಹಾಸನ ಏರಿ ಮೊದಲ ದಿನದ ದರ್ಬಾರ್ ನಡೆಸಿದರು. ಅರಮನೆಯ ಚಾಮುಂಡಿ ತೊಟ್ಟಿಯಲ್ಲಿ ಮುಂಜಾನೆ 4.30ಕ್ಕೆ ಎಣ್ಣೆಶಾಸ್ತ್ರ ಮಾಡಿ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಿ ಗಣಪತಿ ಪೂಜೆ, ಕಳಶ ಸ್ಥಾಪನೆ, ನವಗ್ರಹ ಪೂಜೆ ನಂತರ ಯದುವೀರ್ ಅವರಿಗೆ ಕಂಕಣ ಧಾರಣೆ ಮಾಡಲಾಯಿತು.