ಗುರುವಿಗೆ ಶರಣಾದರೆ ಭವಿಷ್ಯವು ಉಜ್ವಲವಾಗುವುದು ಎನ್ನುವ ಮಾತನ್ನು ನಾವೆಲ್ಲಾ ಕೇಳಿರುತ್ತೇವೆ. ಈ ಮಾತು ಅಪ್ಪಟ ಸತ್ಯವೂ ಹೌದು. ಕುಂಡಲಿಯಲ್ಲಿ ಇರುವ ಗ್ರಹಗತಿಗಳ ಸಂಚಾರದಿಂದ ನಮ್ಮ ಭವಿಷ್ಯ ಬದಲಾಗುತ್ತಲೇ ಇರುತ್ತದೆ. ಹಾಗೆಯೇ ಗುರುವಿನಿಂದ ಪಡೆದ ಜ್ಞಾನ ಹಾಗೂ ಉತ್ತಮ ವರ್ತನೆಗಳು ನಮ್ಮ ವ್ಯಕ್ತಿತ್ವವನ್ನು ನಿರ್ಧರಿಸುತ್ತದೆ. ಒಂಬತ್ತು ಗ್ರಹಗಳಲ್ಲಿ ಗುರುವು ಹೆಚ್ಚು ಪ್ರಭಾವಶಾಲಿಯಾದವನು ಎನ್ನಬಹುದು. ಉತ್ತಮ ಸ್ಥಾನದಲ್ಲಿ ಗುರುವಿದ್ದಾಗ ಜೀವನದಲ್ಲಿ ಯಶಸ್ಸು ಉಂಟಾಗುವುದು ಎನ್ನಲಾಗುತ್ತದೆ. ಇನ್ನು ಮೇಲು-ಕೀಳು ಎನ್ನುವ ತಾರತಮ್ಯವಿಲ್ಲದೆ, ದಾನ-ಧರ್ಮಗಳನ್ನು ಮಾಡಬೇಕು. ಆಗಲೇ ನಮ್ಮ ಜೀವನಕ್ಕೊಂದು ಬೆಲೆ ಸಿಗುವುದು. ಎಲ್ಲಿಗೇ ಹೋದರು ನಮ್ಮ ತನವನ್ನು ನಾವು ಮರೆಯಬಾರದು. ಆಗ ಭಗವಂತನ ಕೃಪೆ ನಮಗೆ ಲಭಿಸುವುದು.
ಗುರುವಾರವಾದ ಇಂದು ನಿಮ್ಮ ಭವಿಷ್ಯ ಹೇಗಿದೆ? ಗುರುವು ಈದಿನ ನಿಮ್ಮ ಭವಿಷ್ಯದ ಮೇಲೆ ಯಾವ ಪರಿಣಾಮ ಬೀರಿದ್ದಾನೆ ಎನ್ನುವುದನ್ನು ಅರಿಯಬೇಕೆಂದರೆ ಈ ವಿಡಿಯೋದಲ್ಲಿರುವ ದಿನಭವಿಷ್ಯ ವೀಕ್ಷಿಸಿ