ಕೃಷಿ ಭೂಮಿಯಲ್ಲಿ ನಿಯಮ ಉಲ್ಲಂಘಿಸಿ ಮನೆ ನಿರ್ಮಾಣ ಮಾಡಿದ ಆರೋಪ ಹೊತ್ತುಕೊಂಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆತಂಕ ಶುರುವಾಗಿದೆ. ಈ ಪ್ರಕರಣವನ್ನು ಸಿಬಿಐಗೆ ವಹಿಸುವ ಸಾಧ್ಯತೆ ಕಂಡು ಬಂದಿದೆ. ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ವಿರುದ್ಧದ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವ ಕುರಿತು ಮೈಸೂರು ಪೊಲೀಸ್ ಆಯುಕ್ತರಿಗೆ ಪೊಲೀಸ್ ಮಹಾನಿರ್ದೇಶಕರು(ಡಿಜಿ -ಐಜಿಪಿ) ಪತ್ರ ಬರೆದಿದ್ದಾರೆ.
DG-IGP writes to Mysuru Police Commissioner over former CM Siddaramaiah land case. DG-IGP seeks police commissioner's opinion on handing over case to CBI. Siddaramaiah is accused of building house on agricultural land in Mysuru.