ಇರಾನಿನಲ್ಲಿ ಸಂಕಷ್ಟಕ್ಕೆ ಸಿಲುಕಿಕೊಂಡಿರುವ ರಾಜ್ಯದ ಭಟ್ಕಳ ಮತ್ತು ಕುಮಟಾ ತಾಲ್ಲೂಕಿನ 18 ಮೀನುಗಾರರನ್ನು ಆದಷ್ಟು ಬೇಗ ಸುರಕ್ಷಿತವಾಗಿ ಬಿಡುಗಡೆಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕೋರಿ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅವರು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಕೋರಿದ್ದಾರೆ.