ಸ್ವಾಮಿನಾಥನ್ ವರದಿ, ರೈತರ ಸಾಲಮನ್ನಾ, ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡುವುದು ಮುಂತಾದ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜಧಾನಿ ದೆಹಲಿಯಲ್ಲಿ ರೈತರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾ ನಿರತ ರೈತರಿಗೆ ಬೆಂಬಲ ನೀಡಲು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರೂ ದೆಹಲಿಗೆ ಧಾವಿಸಿದ್ದಾರೆ. ಅಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಿ ಅವರಿಗೆ ಬೆಂಬಲ ಪ್ರಕಟಿಸಿದ್ದಾರೆ. ರೈತರು ಸರಣಿ ಪ್ರತಿಭಟನೆಗಳನ್ನು ನಡೆಸುತ್ತಿದ್ದರೂ ಅದರ ಬಗ್ಗೆ ಕೇಂದ್ರ ಸರ್ಕಾರ ಕ್ಯಾರೇ ಎನ್ನುತ್ತಿಲ್ಲ ಎಂದು ನರೇಂದ್ರ ಮೋದಿ ಸರ್ಕಾರದ ವಿರುದ್ಧ ದೇವೇಗೌಡ ಹರಿಹಾಯ್ದಿದ್ದಾರೆ.