Lok Sabha elections 2019: BSP chief Mayawati warned Madhya Pradesh Congress government to reconsider her support after the candidate of the SP-BSP Lokendra Singh Rajput quit and joined Congress.
ಮಧ್ಯಪ್ರದೇಶದಲ್ಲಿ ಎಸ್‌ಪಿ, ಬಿಎಸ್‌ಪಿ ಹಾಗೂ ಪಕ್ಷೇತರರ ಸಹಾಯದಿಂದ ಸರ್ಕಾರ ರಚಿಸಿರುವ ಕಾಂಗ್ರೆಸ್‌ಗೆ ಸಂಕಟವೊಂದು ಶುರುವಾಗಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಅನ್ನು ಲೆಕ್ಕಕ್ಕೆ ತೆಗೆದುಕೊಳ್ಳದೆ ಎಸ್‌ಪಿ ಜತೆಗೂಡಿ ಚುನಾವಣಾ ಅಖಾಡಕ್ಕೆ ಇಳಿದಿರುವ ಬಿಎಸ್‌ಪಿ ನಾಯಕಿ ಮಾಯಾವತಿ, ರಾಜ್ಯದಲ್ಲಿ ಕಾಂಗ್ರೆಸ್‌ಗೆ ನೀಡಿರುವ ಬೆಂಬಲವನ್ನು ಹಿಂದಕ್ಕೆ ಪಡೆದುಕೊಳ್ಳುವ ಬೆದರಿಕೆ ಹಾಕಿದ್ದಾರೆ.