Former CM and CLP leader Siddaramaiah met four leaders including Cheluvarayaswamy, Zameer and taken info of Mandya, Hassan and Tumakuru LS election?
ರಾಜ್ಯದ ಎರಡನೇ ಹಂತದ ಚುನಾವಣೆ ಮುಗಿದ ನಂತರ ಸ್ವಲ್ಪದಿನ ವಿಶ್ರಾಂತಿಯ ಮೊರೆಹೋಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ಸಕ್ರಿಯ ರಾಜಕೀಯದಲ್ಲಿ ತೊಡಗಿಸಿಕೊಂಡಿದ್ದಾರೆ. ರಮೇಶ್ ಜಾರಕಿಹೊಳಿ ಮತ್ತೆ ಅಪಸ್ವರ ಎತ್ತಿದಾಗ, ಮೌನಕ್ಕೆ ಶರಣಾಗಿದ್ದ ಸಿದ್ದರಾಮಯ್ಯನವರ ನಡೆ ವ್ಯಾಪಕ ಚರ್ಚೆಯಾಗೆ ಗುರಿಯಾಗಿತ್ತು. ಎರಡು ದಿನದಿಂದ ಕುಂದಗೋಳ ಮತ್ತು ಚಿಂಚೋಳಿ ಕ್ಷೇತ್ರದ ಅಸೆಂಬ್ಲಿ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿನ ಸಭೆಯಲ್ಲಿ ಸಿದ್ದರಾಮಯ್ಯ ಭಾಗವಹಿಸಿದ್ದರು. ಈ ಮಧ್ಯೆ, ಮಂಗಳವಾರ (ಏ 30) ರಾತ್ರಿ ಸಿದ್ದರಾಮಯ್ಯ ನಾಲ್ವರು ಮುಖಂಡರನ್ನು ತನ್ನ ನಿವಾಸಕ್ಕೆ ಕರೆಸಿಕೊಂಡು ಮಾತುಕತೆ ನಡೆಸಿದ್ದಾರೆ.