ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ ಅವರು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಶ್ರೀ ಜಯಚಾಮರಾಜೇಂದ್ರ ತಾಲ್ಲೂಕು ಆಸ್ಪತ್ರೆಯಲ್ಲಿ ನರ್ಸ್ ಆಗಿರುವ ಶ್ರೀಮತಿ ರೂಪ ಅವರು ತುಂಬು ಗರ್ಭಿಣಿಯಾಗಿದ್ದರೂ ರಜೆ ಪಡೆಯದೆ ಕಾರ್ಯ ನಿರ್ವಹಿಸುತ್ತಿರುವುದಕ್ಕೆ ಅವರಿಗೆ ಅಭಿನಂದನೆಯನ್ನು ಸಲ್ಲಿಸಿದ್ದಾರೆ. ರೂಪ ಅವರಿಗೆ ಕರೆ ಮಾಡಿದ ಮುಖ್ಯಮಂತ್ರಿಗಳು ಅವರ ವೃತ್ತಿಪರತೆಗೆ ಮೆಚ್ಚುಗೆ ಸೂಚಿಸಿ, ರಜೆ ತೆಗೆದುಕೊಂಡು ಮನೆಯಲ್ಲಿ ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದ್ದಾರೆ.