Darshan fans outraged against director Pavan Wadeyar because he called boss to Yash
ಮತ್ತೆ ಬಾಸ್ ಪದ ವಿವಾದದ ಕೇಂದ್ರವಾಗಿದ್ದು, ನಿರ್ದೇಶಕ ಪವನ್ ಒಡೆಯರ್ ವಿರುದ್ಧ ದರ್ಶನ್ ಅಭಿಮಾನಿಗಳು ರೊಚ್ಚಿಗೆದ್ದಿದ್ದಾರೆ. ಇತ್ತೀಚಿಗೆ ಪವನ್ ಒಡೆಯರ್ ಯಶ್ ವಿಚಾರವಾಗಿ ಸಾಮಾಜಿಕ ಜಾಲತಾಣದಲ್ಲಿ ಒಂದು ಪೋಸ್ಟ್ ಮಾಡಿದ್ದಾರೆ. ಪೋಸ್ಟ್ ನಲ್ಲಿ ಯಶ್ ಗೆ ಬಾಸ್ ಎಂದು ಉಲ್ಲೇಖ ಮಾಡಿರುವುದು ದರ್ಶನ್ ಅಭಿಮಾನಿಗಳನ್ನು ಕೆರಳಿಸಿದೆ. ಹಾಗಾಗಿ ಪವನ್ ವಿರುದ್ಧ ದರ್ಶನ್ ಅಭಿಮಾನಿಗಳು ಕೆಂಡಕಾರುತ್ತಿದ್ದಾರೆ. ಅಭಿಮಾನಿಗಳು ಅವಾಚ್ಯ ಶಬ್ದಗಳನ್ನು ಬಳಸಿ ಕೆಟ್ಟದಾಗಿ ಟ್ರೋಲ್ ಮಾಡಿ ಕಾಮೆಂಟ್ ಮಾಡುತ್ತಿದ್ದಾರೆ.