ಬಿಗೌಸ್ ಎಲೆಕ್ಟ್ರಿಕ್ ಸ್ಕೂಟರ್ ಅನಾವರಣಗೊಳಿಸಿದ ಆರ್‌ಆರ್ ಗ್ಲೋಬಲ್

2020-07-09 23

ಪುಣೆ ಮೂಲದ ಆರ್‌ಆರ್ ಗ್ಲೋಬಲ್ ಕಂಪನಿಯು ತನ್ನ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಆದ ಬಿಗೌಸ್ ಮಾದರಿಯನ್ನು ಅನಾವರಣಗೊಳಿಸಿದೆ. ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಹಲವಾರು ವಿಶೇಷತೆಗಳೊಂದಿಗೆ ಬಿಡುಗಡೆಯಾಗಲಿದೆ.

ಹಲವಾರು ಆಟೋ ಕಂಪನಿಗಳು ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯತ್ತ ಗಮನಹರಿಸುತ್ತಿವೆ. ದಿನಬಳಕೆಯ ಎಲೆಕ್ಟ್ರಾನಿಕ್ ಉತ್ಪನ್ನಗಳ ಉತ್ಪಾದನೆಯಲ್ಲಿ
ಮುಂಚೂಣಿಯಲ್ಲಿರುವ ಆರ್‌ಆರ್ ಗ್ಲೋಬಲ್ ಕಂಪನಿಯು ಸಹ ಎಲೆಕ್ಟ್ರಿಕ್ ಸ್ಕೂಟರ್ ನಿರ್ಮಾಣ ಮಾಡುವ ಮೂಲಕ ಆಟೋ ಮೊಬೈಲ್ ಉದ್ಯಮಕ್ಕೆ ಕಾಲಿಟ್ಟಿದೆ.