ಜಿ 310 ಆರ್ ಹಾಗೂ ಜಿ 310 ಜಿಎಸ್ ಬೈಕುಗಳನ್ನು ಬಿಡುಗಡೆಗೊಳಿಸಿದ ಬಿಎಂಡಬ್ಲ್ಯು ಮೋಟೊರಾಡ್

2020-10-08 9

ಬಿಎಂಡಬ್ಲ್ಯು ಮೋಟೊರಾಡ್ ಕಂಪನಿಯು ತನ್ನ ಹೊಸ ಜಿ 310 ಆರ್ ಹಾಗೂ ಜಿ 310 ಜಿಎಸ್ ಬೈಕುಗಳನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಹೊಸ ಬಿಎಂಡಬ್ಲ್ಯು ಜಿ 310 ಆರ್ ಬೈಕಿನ ಬೆಲೆ ಎಕ್ಸ್ ಶೋರೂಂ ದರದಂತೆ ರೂ..2.45 ಲಕ್ಷಗಳಾದರೆ, ಜಿ 310 ಜಿಎಸ್ ಬೈಕಿನ ಬೆಲೆ ಎಕ್ಸ್ ಶೋರೂಂ ದರದಂತೆ ರೂ.2.85 ಲಕ್ಷಗಳಾಗಿದೆ.

ಹೊಸ ಬಿಎಂಡಬ್ಲ್ಯು ಜಿ 310 ಆರ್ ಬೈಕಿನಲ್ಲಿ ಹಲವಾರು ಫೀಚರ್ ಗಳನ್ನು ಅಳವಡಿಸಲಾಗಿದೆ. ಈ ಬೈಕಿನ ಸ್ಟೈಲಿಂಗ್ ನಲ್ಲಿ ಹಲವಾರು ಅಪ್ ಡೇಟ್ ಗಳನ್ನು ಮಾಡಲಾಗಿದೆ. ಹೊಸ ಬಿಎಂಡಬ್ಲ್ಯು ಜಿ 310 ಆರ್ ಬೈಕೈನಲ್ಲಿರುವ ಹೆಡ್‌ಲ್ಯಾಂಪ್, ಟರ್ನ್ ಸಿಗ್ನಲ್‌, ಟೇಲ್ ಲ್ಯಾಂಪ್‌ ಎಲ್ಇಡಿ ಲೈಟಿಂಗ್ ಗಳನ್ನು ಅಪ್ ಡೇಟ್ ಮಾಡಲಾಗಿದೆ.

ಅಪ್ ಡೇಟ್ ನ ಭಾಗವಾಗಿ ಹೊಸ ಜಿ 310 ಆರ್ ಬೈಕ್ ಅನ್ನು ಹೊಸ ಬಣ್ಣದಲ್ಲಿ ಬಿಡುಗಡೆಗೊಳಿಸಲಾಗಿದೆ.

Videos similaires