ರಾಯಲ್ ಎನ್‌ಫೀಲ್ಡ್ ಮಿಟಿಯೊರ್ 350 ಕ್ರೂಸರ್ ಬೈಕ್ ರೈಡಿಂಗ್ ರಿವ್ಯೂ

2020-11-23 1,285

ರಾಯಲ್ ಎನ್‌ಫೀಲ್ಡ್ ಕಂಪನಿಯು ತನ್ನ ಹೊಸ ಮಿಟಿಯೊರ್ 350 ಕ್ರೂಸರ್ ಬೈಕ್ ಮಾದರಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿದ್ದು, ಹೊಸ ಬೈಕ್ ಮಾದರಿಯು ಫೈರ್‌ಬಾಲ್, ಸ್ಟೆಲ್ಲಾರ್ ಮತ್ತು ಸೂಪರ್‌ನೊವಾ ವೆರಿಯೆಂಟ್‌ಗಳೊಂದಿಗೆ ಅತ್ಯುತ್ತಮ ಫೀಚರ್ಸ್ ಪಡೆದುಕೊಂಡಿದೆ. ಸುಧಾರಿತ ತಂತ್ರಜ್ಞಾನ ಪ್ರೇರಣೆ ಮತ್ತು ನವೀಕೃತ ವಿನ್ಯಾಸ ಹೊಂದಿರುವ ಮಿಟಿಯೊರ್ 350 ಕ್ರೂಸರ್ ಬೈಕ್ ಮಾದರಿಯು ಥಂಡರ್‌ಬರ್ಡ್ ಮಾದರಿಗಿಂತಲೂ ಆಕರ್ಷಕವಾಗಿದ್ದು, ಇತ್ತೀಚೆಗೆ ಡ್ರೈವ್‌ಸ್ಪಾರ್ಕ್ ತಂಡವು ಹೊಸ ಬೈಕಿನ ಕಾರ್ಯಕ್ಷಮತೆ ಕುರಿತಾಗಿ ಫಸ್ಟ್ ರೈಡಿಂಗ್ ಕೈಗೊಂಡಿತ್ತು.

ಮಿಟಿಯೊರ್ 350 ಬೈಕ್ ಮಾದರಿಯು 349-ಸಿಸಿ ಫ್ಯೂಲ್ ಇಂಜೆಕ್ಷೆಡ್ ಸಿಂಗಲ್ ಸಿಲಿಂಡರ್ ಹೊಂದಿದ್ದು, 5-ಸ್ಪೀಡ್ ಗೇ‌ರ್‌ಬಾಕ್ಸ್‌ನೊಂದಿಗೆ 20.2-ಬಿಎಚ್‌ಪಿ ಮತ್ತು 27-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು. ಹೊಸ ಬೈಕ್ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 1.75 ಲಕ್ಷದಿಂದ ರೂ. 1.81 ಲಕ್ಷ ಬೆಲೆ ಪಡೆದುಕೊಂಡಿದ್ದು, ಹೊಸ ಬೈಕಿನಲ್ಲಿ ನೀಡಲಾಗಿರುವ ಟಿಪ್ಪರ್ ಮೀಟರ್ ಸೌಲಭ್ಯವು ಪ್ರಮುಖ ಆಕರ್ಷಣೆಯಾಗಿದೆ.