ರಾಜ್ಯದಲ್ಲಿ ಚಾಲಕರು ಸೇರಿ ಮೂರು ಸಾವಿರ ಸಿಬ್ಬಂದಿ 108 ಆಂಬ್ಯುಲೆನ್ಸ್‌ಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೊರೊನಾ ಸೋಂಕಿನಿಂದ ಐದು ನಿಮಿಷ ವಿಶ್ರಾಂತಿ ಪಡೆಯಲು ಆಗುತ್ತಿಲ್ಲ. ಅಷ್ಟೊಂದು ಬೇಡಿಕೆ ಸೃಷ್ಟಿಯಾಗಿದೆ. ಹಗಳಿರುಳು ದುಡಿಯುತ್ತಿದ್ದಾರೆ. ಎರಡು ತಿಂಗಳಿನಿಂದ ವೇತನ ಬಿಡುಗಡೆ ಮಾಡಿಲ್ಲ. ನಾಲ್ಕು ವರ್ಷ ಸೇವೆ ಸಲ್ಲಿಸಿದ್ದಕ್ಕೆ ನೀಡಬೇಕಿದ್ದ ವಿಶೇಷ ಭತ್ಯೆಯನ್ನು ಕೂಡ ಬಿಡುಗಡೆ ಮಾಡಿಲ್ಲ. ಹೀಗಾಗಿ 108 ಚಾಲಕರು ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ್ದಾರೆ
The 108 ambulance drivers have not got their salaries for two months. 108