Kurukshetra Movie Will Be Released On April 5th: Producer Munirathna

2021-07-06 0

MLA and Producer Munirathna announced that his movie 'Munirathna #Kurukshetra' starring Challenging Star #Darshan, V Ravichandran, Nikhil Kumar, Arjun Sarja, Sai Kumar Shashi Kumar, Ravishankar, Haripriya, Meghana Raj and others are in the lead cast.

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟಿಸಿದ ಬಹುನಿರೀಕ್ಷಿತ ‘ಕುರುಕ್ಷೇತ್ರ’ ಚಿತ್ರ ಏಪ್ರಿಲ್ 5ರಂದು ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ಮಾಪಕ ಮುನಿರತ್ನ ಅವರು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಇಂದು ರಾಜರಾಜೇಶ್ಚರಿನಗರ ಶಾಸಕ, ನಿರ್ಮಾಪಕ ಮುನಿರತ್ನ ಅವರು ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ, “ಕುರುಕ್ಷೇತ್ರ ಚಿತ್ರ ಏಪ್ರಿಲ್ 5ರಂದು ರಾಜ್ಯಾದ್ಯಂತ ಬಿಡುಗಡೆ ಆಗಲಿದೆ” ಎಂದು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಕುರುಕ್ಷೇತ್ರ ಸಿನಿಮಾ ಬಿಡುಗಡೆಗಾಗಿ ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದರು. ಆದರೆ ಸಿನಿಮಾ ಬಿಡುಗಡೆಯಾಗುವುದಕ್ಕೆ ತಡವಾಗುತ್ತಿತ್ತು. ಇದಕ್ಕೆ ಸ್ವತಃ ಮುನಿರತ್ನ ಅವರೇ ಈ ಹಿಂದೆ ಸ್ಪಷ್ಟನೆ ಕೊಟ್ಟಿದ್ದರು. `ಕುರುಕ್ಷೇತ್ರ’ ಒಂದು ಪೌರಾಣಿಕ ಸಿನಿಮಾವಾಗಿದ್ದು, ಈ ಸಿನಿಮಾದಲ್ಲಿ ಕಂಪ್ಯೂಟರ್ ಗ್ರಾಫಿಕ್ಸ್ (ಸಿಜೆ) ಕೆಲಸ ತುಂಬಾ ಇದೆ. ಆದರೆ ನಾವು ಅಂದುಕೊಂಡ ಹಾಗೆ ಬರುತ್ತಿಲ್ಲ. ಅದಕ್ಕೆ ಪದೇ ಪದೇ ರೀ- ವರ್ಕ್ ಮಾಡುತ್ತಿದ್ದೇವೆ. ಆದ್ದರಿಂದ ಈ ಸಿನಿಮಾ ಬಿಡುಗಡೆಗೆ ತಡವಾಗುತ್ತಿದೆ ಎಂದು ತಿಳಿಸಿದ್ದರು.

ಕುರುಕ್ಷೇತ್ರಕ್ಕೆ ಕೋಟಿ ಕೋಟಿ ಹಾಕಿ ಸಿನಿಮಾ ಮಾಡಿದ್ದೇವೆ. ನಾನು ಜನರಿಗೆ ಉತ್ತಮ ಗುಣಮಟ್ಟದಲ್ಲಿ ಸಿನಿಮಾ ತೋರಿಸಬೇಕು ಎನ್ನುವ ಕನಸು ನನಗಿದೆ. ಆದ್ದರಿಂದ ಸಿನಿಮಾದ ಕೆಲಸಗಳು ನಡೆಯುತ್ತಿದೆ. ನನ್ನ ಕನಸು ಈಡೇರುವ ತನಕ `ಕುರುಕ್ಷೇತ್ರ’ ತೆರೆ ಮೇಲೆ ಬರಲ್ಲ ಎಂದು ಮುನಿರತ್ನ ತಿಳಿಸಿದ್ದರು. ಈಗ ಸಿನಿಮಾ ಬಿಡುಗಡೆಗೆ ತಯಾರಾಗಿದ್ದು, ಚಿತ್ರದ ಎಲ್ಲ ಕೆಲಸಗಳು ಮುಗಿದಿದೆ. ಇದನ್ನೂ ಓದಿ: ಸಿಎಂ ಬಜೆಟ್ ಮಂಡಿಸದಿದ್ದರೆ 5 ಕೋಟಿಗೆ ಕುರುಕ್ಷೇತ್ರ ಸಿನಿಮಾ ಹಕ್ಕನ್ನು ಬಿಜೆಪಿಗೆ ನೀಡ್ತೀನಿ: ಮುನಿರತ್ನ ಸವಾಲು

ಕುರುಕ್ಷೇತ್ರ ಬರೋಬ್ಬರಿ 50 ರಿಂದ 60 ಕೋಟಿ ರೂ. ವೆಚ್ಚದಲ್ಲಿ ವೃಷಭಾದ್ರಿ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗಿದೆ. ಕುರುಕ್ಷೇತ್ರ ಚಿತ್ರವನ್ನು ನಾಗಣ್ಣ ನಿರ್ದೇಶಿಸಿದ್ದಾರೆ. ಈ ಮೊದಲು ದರ್ಶನ್ ಅಭಿನಯದ `ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಚಿತ್ರವನ್ನು ನಾಗಣ್ಣ ನಿರ್ದೇಶಿಸಿದ್ದರು. ನೂತನ ತಂತ್ರಜ್ಞಾನದಲ್ಲಿ ಬಾಹುಬಲಿ ಚಿತ್ರಕ್ಕಾಗಿ ದುಡಿದ ತಂತ್ರಜ್ಞಾನಿಗಳ ಕೈಚಳಕದಲ್ಲಿ ಕನ್ನಡದ ಕುರುಕ್ಷೇತ್ರ ಮೂಡಿಬಂದಿದೆ.

ಈ ಚಿತ್ರದಲ್ಲಿ ರೆಬಲ್ ಸ್ಟಾರ್ ಅಂಬರೀಶ್, ಕ್ರೇಜಿಸ್ಟಾರ್ ರವಿಚಂದ್ರನ್, ಅರ್ಜುನ್ ಸರ್ಜಾ, ಡೈಲಾಗ್ ಕಿಂಗ್ ಸಾಯಿಕುಮಾರ್, ಶಶಿಕುಮಾರ್, ಆರ್ಮುಗಂ ಖ್ಯಾತಿಯ ರವಿಶಂಕರ್, ಶ್ರೀನಿವಾಸ್ ಮೂರ್ತಿ ಹಾಗೂ ಪ್ರಣಯ ರಾಜ ಶ್ರೀನಾಥ್ ಅಭಿನಯಿಸಿದ್ದಾರೆ. ಭಾರತಿ ವಿಷ್ಣುವರ್ಧನ್, ಹರಿಪ್ರಿಯಾ, ಮೇಘನಾ ರಾಜ್, ಪವಿತ್ರಾ ಲೋಕೇಶ್ ಕೂ?