ಜಾಮೀನಿನ ನಿರೀಕ್ಷೆಯಲ್ಲಿದ್ದ ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್‌ಗೆ ಮತ್ತೆ ಆಘಾತ ಉಂಟಾಗಿದೆ. ಐಷಾರಾಮಿ ಹಡಗಿನಲ್ಲಿ ನಡೆದ ಡ್ರಗ್ಸ್ ಪಾರ್ಟಿ ಕೇಸ್‌ನಲ್ಲಿ ಸಿಲುಕಿರುವ ಆರ್ಯನ್ ಖಾನ್ ಮತ್ತು ಇತರ ಏಳು ಮಂದಿಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಜೊತೆಗೆ ಈ ಪ್ರಕರಣವನ್ನು ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯ ವಿಚಾರಣೆ ನಡೆಸಲಿದೆ ಎಂದು ಮುಂಬೈನ ಕಿಲ್ಲಾ ಕೋರ್ಟ್ ತಿಳಿಸಿದೆ.