'ಕೆಜಿಎಫ್ 2' ಪ್ಯಾನ್ ಇಂಡಿಯಾ ಸಿನಿಮಾ. ಕನ್ನಡ ಸೇರಿದಂತೆ ತೆಲುಗು, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ಬಿಡುಗಡೆಯಾಗುತ್ತಿದೆ. ಅದಕ್ಕೆ ಟ್ರೈಲರ್ ಕೂಡ ಐದು ಭಾಷೆಯಲ್ಲಿ ರಿಲೀಸ್ ಆಗಿದೆ. ಇಡೀ ವಿಶ್ವವೇ ಇದೊಂದು ಟ್ರೈಲರ್‌ಗಾಗಿ ಕಾದುಕೂತಿತ್ತು. ಟ್ರೈಲರ್ ನೋಡಿದ ಬಳಿಕ ಐದೂ ಚಿತ್ರರಂಗದ ಸೆಲೆಬ್ರೆಟಿಗಳು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅದರಲ್ಲೂ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ 'ಕೆಜಿಎಫ್ 2' ಟ್ರೈಲರ್ ನೋಡಿ ಪ್ರತಿಕ್ರಿಯೆ ನೀಡಿದ್ದಾರೆ. ಅದು ಸ್ಯಾಂಡಲ್‌ವುಡ್‌ನಲ್ಲಿ ಅಚ್ಚರಿಗೆ ಕಾರಣವಾಗಿದೆ.
Rashmika Mandanna Reaction to KGF Chapter 2 Trailer.