ದಕ್ಷಿಣ ಆಫ್ರಿಕಾ ವಿರುದ್ಧದ 5 ಪಂದ್ಯಗಳ ಟಿ-20 ಸರಣಿಗೆ ಟೀಂ ಇಂಡಿಯಾವನ್ನ ಪ್ರಕಟಿಸಲಾಗಿದೆ. ಹಿರಿಯ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬೂಮ್ರಾಗೆ ವಿಶ್ರಾಂತಿ ನೀಡಲಾಗಿದೆ. ಐಪಿಎಲ್‍ನಲ್ಲಿ ಲಕ್ನೋ ತಂಡವನ್ನ ಮುನ್ನಡೆಸಿ ಯಶಸ್ವಿಯಾಗಿರುವ ಕನ್ನಡಿಗ ಕೆ.ಎಲ್ ರಾಹುಲ್‍ಗೆ ನಾಯಕತ್ವದ ಪಟ್ಟ ಸಿಕ್ಕಿದೆ. ಇನ್ನು, ಐಪಿಎಲ್‍ನಲ್ಲಿ ಮಿಂಚಿದ ಯುವ ಆಟಗಾರರಿಗೆ ಅದೃಷ್ಟ ಖುಲಾಯಿಸಿದೆ. ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ರಿಷಬ್ ಪಂತ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ಯಜುವೇಂದ್ರ ಚಹಲ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಆವೇಶ್ ಖಾನ್, ವೆಂಕಟೇಶ್ ಅಯ್ಯರ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲ್ಲಿಕ್‍ಗೆ ತಂಡದಲ್ಲಿ ಸ್ಥಾನ ಸಿಕ್ಕಿದೆ. ಪ್ರಮುಖವಾಗಿ ಐಪಿಎಲ್‍ನಲ್ಲಿ ಮಿಂಚು ಹರಿಸಿದ ದಿನೇಶ್ ಕಾರ್ತಿಕ್, ವೆಂಕಟೇಶ್ ಅಯ್ಯರ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲ್ಲಿಕ್ ಅವಕಾಶ ಗಿಟ್ಟಿಸಿಕೊಳ್ಳುವಲ್ಲಿ ಸಕ್ಸಸ್ ಆಗಿದ್ದಾರೆ. ಜೂನ್ 9 ರಿಂದ 19 ರವರೆಗೆ ಟಿ-ಸರಣಿ ನಡೆಯಲಿದ್ದು, ದೆಹಲಿ, ಕಟಕ್, ವಿಶಾಖಪಟ್ಟಣಂ, ರಾಜ್‍ಕೋಟ್ ಹಾಗೂ ಬೆಂಗಳೂರಿನಲ್ಲಿ ಪಂದ್ಯಗಳನ್ನ ಆಯೋಜಿಸಲಾಗಿದೆ.
#PublicTV #Newscafe #T20