`ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ' ಕಾರ್ಯಕ್ರಮದ ಭಾಗವಾಗಿ ಬೀದರ್ ಜಿಲ್ಲೆ ಔರಾದ್ ತಾಲೂಕಿನ ವಡಗಾಂವ್‍ನಲ್ಲಿ ಕಂದಾಯ ಸಚಿವ ಆರ್.ಅಶೋಕ್ ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಗ್ರಾಮಸಭೆ ಮಾಡಿ ಜನ್ರ ಸಮಸ್ಯೆಗಳನ್ನು ಆಲಿಸಿದ ಕಂದಾಯ ಸಚಿವರು ಸ್ಥಳದಲ್ಲೇ ಪರಿಹಾರಕ್ಕೆ ಸೂಚಿಸಿದ್ರು. ಚರಂಡಿ ವ್ಯವಸ್ಥೆ, ಕಾಂಕ್ರೀಟ್ ರಸ್ತೆ, ವಿದ್ಯುತ್ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳ ಪರಿಹಾರಕ್ಕೆ ಸ್ಥಳದಲ್ಲೇ 1 ಕೋಟಿ ರೂಪಾಯಿ ಅನುದಾನ ಘೋಷಿಸಿದ್ರು. ಬಳಿಕ ಮಕ್ಕಳ ಸಾಂಸ್ಕøತಿಕ ಕಾರ್ಯಕ್ರಮ ವೀಕ್ಷಿಸಿದ ಸಚಿವ ಆರ್.ಅಶೋಕ್ ಬಳಿಕ ರಾತ್ರಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿ ವಾಸ್ತವ್ಯ ಹೂಡಿದ್ರು. ಇಂದು ಕಲಬುರಗಿಗೆ ಆರ್.ಅಶೋಕ್ ಹೊರಡಲಿದ್ದಾರೆ.
#HRRanganath #NewsCafe #PublicTV #RAshok