ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸ ಕೋವಿಡ್ ಪರೀಕ್ಷೆಯ ಗೊಂದಲ ತಂದಿಟ್ಟಿದೆ. ಪ್ರಧಾನಿ ಬೆಂಗಳೂರಿನ ಕಾರ್ಯಕ್ರಮಕ್ಕೆ ಒಂದು ರೂಲ್ಸ್, ಮೈಸೂರಿನ ಕಾರ್ಯಕ್ರಮಕ್ಕೆ ಒಂದು ರೂಲ್ಸ್ ಎಂಬಾಂತಾಗಿದೆ. ಬೆಂಗಳೂರಿನ ಪ್ರಧಾನಿ ಕಾರ್ಯಕ್ರಮಕ್ಕೆ ಕೋವಿಡ್ ಟೆಸ್ಟ್ ಕಡ್ಡಾಯ ಎಂಬ ರೂಲ್ಸ್ ಮತ್ತು ಮೈಸೂರಿನ ಪ್ರಧಾನಿ ಕಾರ್ಯಕ್ರಮಕ್ಕೆ ಎರಡು ಡೋಸ್ ಸರ್ಟಿಫಿಕೇಟ್ ಸಾಕು ಎಂಬ ರೂಲ್ಸ್ ಮಾಡಿದ್ದು, ಪೊಲೀಸ್ ಇಲಾಖೆಯ ಆದೇಶ ಗೊಂದಲ ಸೃಷ್ಟಿಸಿದೆ. ಪ್ರಧಾನಿ ಕಾರ್ಯಕ್ರಮದ ಕರ್ತವ್ಯಕ್ಕೆ ಹಾಜರಾಗುವ ಅಧಿಕಾರಿಗಳು, ಸಿಬ್ಬಂದಿಗೆ ಕೋವಿಡ್ ಟೆಸ್ಟ್ ಕಡ್ಡಾಯ, ಅಲ್ಲದೇ ಮಾಧ್ಯಮ ಪ್ರತಿನಿಧಿಗಳಿಗೂ ಕೋವಿಡ್ ಟೆಸ್ಟ್ ಕಡ್ಡಾಯ ಎಂದು ಸೂಚಿಸಿದೆ. ಇದೀಗ ಸಿಎಂ, ಸಚಿವರು, ಶಾಸಕರು, ಬಿಜೆಪಿ ಮುಖಂಡರು ಕೂಡಾ ಟೆಸ್ಟ್ ಮಾಡಿಸಿಕೊಳ್ಳಬೇಕೆಂಬ ಗೊಂದಲ ಎದ್ದಿದೆ. ಜೊತೆಗೆ ಮೋದಿ ಪಾಲ್ಗೊಳ್ಳುವ ಸಾರ್ವಜನಿಕ ಕಾರ್ಯಕ್ರಮಕ್ಕೆ ಬರುವ ಜನರೂ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕೇ ಬೇಡವೇ ಎಂಬ ಗೊಂದಲ ಎದ್ದಿದೆ. ಈ ಮದ್ಯೆ, ಮೋದಿ ಭೇಟಿಗೆ ಮುನ್ನ ಇವತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ರಾಜ್ಯಕ್ಕೆ ಬರ್ತಿದ್ದಾರೆ.
#publictv #newscafe #hrranganath